ಸುಳ್ಯ:ಗ್ರಾಮ ಸ್ವರಾಜ್ ಪ್ರತಿಷ್ಠಾನ ದಕ್ಷಿಣ ಕನ್ನಡ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯಾಡಳಿತ ಜನಪ್ರತಿನಿಧಿಗಳ ಕ್ರೀಡಾ – ಸಾಂಸ್ಕೃತಿಕ ಉತ್ಸವ”ಹೊಂಬೆಳಕು -2025″”ಸ್ಥಳೀಯಾಡಳಿತ ಸಂಭ್ರಮ” ಕಾರ್ಯಕ್ರಮ ಫೆ. 22ರಂದು ಸಹ್ಯಾದ್ರಿ ಕಾಲೇಜು ಕ್ರೀಡಾಂಗಣ ನಡೆಯಲಿದೆ. ಉಭಯ ಜಿಲ್ಲೆಯ
ಎಲ್ಲಾ ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ಸಿಬ್ಬಂದಿಗಳಿಗೆ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದೆ. ಈ ಕಾರ್ಯಕ್ರಮದ ಸುಳ್ಯ ತಾಲೂಕಿನ ಸಂಯೋಜಕರಾಗಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸುಳ್ಯ ತಾಲೂಕು ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ ಮತ್ತು ದ. ಕ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ ಅವರನ್ನು ಗ್ರಾಮ ಸ್ವರಾಜ್ ಪ್ರತಿಷ್ಠಾನ ದಕ್ಷಿಣ ಕನ್ನಡ ಇದರ ಅಧ್ಯಕ್ಷರಾದ ಸುಭಾಶ್ ಚಂದ್ರ ಶೆಟ್ಟಿ ಕುಲಾಲು ನೇಮಕ ಮಾಡಿದ್ದಾರೆ.