ಮಂಗಳೂರು:ಮಂಗಳೂರು ನಗರ ಪೋಲಿಸ್ ಮತ್ತು ದ.ಕ ಜಿಲ್ಲಾ ಪೋಲಿಸ್ ಪೋಲಿಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ನೂತನ ವಸತಿಗೃಹಗಳ ಕಟ್ಟಡ ನಿರ್ಮಾಣದ ಉದ್ಘಾಟನಾ ಸಮಾರಂಭ ಹಾಗೂ ಶಂಕುಸ್ಥಾಪನಾ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು.ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಅವರು ಕಟ್ಟಡದ ಶಂಕುಸ್ಥಾಪನೆ ನೆರೆವೆರೆಸಿದರು. ಬಳಿಕ ಮಾತನಾಡಿದ ಅವರು ಮಂಗಳೂರು ಕಮಿಷನರೇಟ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧಿಕಾರಿಗಳ
ಸಭೆ ನಡೆಸಿದ್ದೇನೆ ಅಪರಾಧ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಿದ್ದೇನೆ,ಆ್ಯಂಟಿ ಡ್ರಗ್ಸ್ ಕಾರ್ಯಾಚರಣೆ ತ್ವರಿತವಾಗಿ ಹಾಗು ಪರಿಣಾಮ ಕಾರಿಯಾಗಿ ನಡೆಯುತ್ತಿದೆ ಡ್ರಗ್ಸ್ ಪ್ರಕಾರಗಳ ಸಂಖ್ಯೆ ಕಡಿಮೆಯಾಗಿದೆ.ಆ ನಿಟ್ಟಿನಲ್ಲಿ ಅಧಿಕಾರಿಗಳು ಪರಿಣಾಮಕಾರಿ ಕ್ರಮ ಕೈಗೊಂಡಿದ್ದಾರೆ ಡ್ರಗ್ಸ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಆ್ಯಂಟಿ ಡ್ರಗ್ ಕಾರ್ಯಾಚರಣೆ ಮತ್ತಷ್ಟು ಹೆಚ್ಚಿಸುವಂತೆ ಸೂಚನೆಯನ್ನು ನೀಡಿದ್ದೇನೆ. ಅಪರಾಧ

ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಹತ್ಯಾ ಪ್ರಕರಣಗಳು ನಿಂತಿವೆ.ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಚೆನ್ನಾಗಿದೆ ಎಂದರು.ಕರಾವಳಿಯಲ್ಲಿ ಅಭಿವೃದ್ಧಿ ಪೂರಕ ವಾತಾವರಣ ನಿರ್ಮಾಣವಾಗುತ್ತಿದೆ,ಮಂಗಳೂರು ರಾಜ್ಯದ ಪ್ರತಿಷ್ಠಿತ ಜಿಲ್ಲೆ ಇಲ್ಲಿ ಮತ್ತೇ ಅಭಿವೃದ್ಧಿ ಪೂರಕ ವಾತಾವರಣ ನಿರ್ಮಾಣವಾಗುತ್ತಿದೆ ಇಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ, ಐಟಿ ಉದ್ಯಮ ಹಾಗೆ ಸೆಮಿಕಂಡಕ್ಟರ್ ಗಳ ಉತ್ಪಾದನೆ ಬಗ್ಗೆ ಸರಕಾರ ಚಿಂತನೆ ನಡೆಸಿದೆ ಎಂದು ಹೇಳಿದರು.
ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಪಶ್ಚಿಮ ವಲಯದ ಐ.ಜಿ ಅಮಿತ್ ಸಿಂಗ್,ಮಂಗಳೂರು ನಗರ ಪೋಲಿಸ್ ಆಯುಕ್ತರು ಸುಧೀರ್ ಕುಮಾರ್ ರೆಡ್ಡಿ, ಎಸ್. ಪಿ ಅರುಣ್.ಕೆ, ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ,ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ.ಎ ಗಫೂರ್ ,ಗೇರು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಮಮತ ಗಟ್ಟಿ ,ಪರಿಸರ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ ಮೊದಲಾದವರು ಉಪಸ್ಥಿತರಿದ್ದರು.





