ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪೋಲಿಸ್ ಠಾಣೆಗೆ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಠಾಣೆಯ ಕೆಲಸ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು ಠಾಣಾ ಕಟ್ಟಡ, ಠಾಣೆಯ ವ್ಯವಸ್ಥೆಗಳು ಸುವ್ಯವಸ್ಥಿತವಾಗಿ ಸ್ವಚ್ಛ ಮತ್ತು ಸುಂದರವಾಗಿ ಇರಿಸಿರುವುದಕ್ಕೆ ಮತ್ತು

ಉದ್ಯಾನವನ ಮತ್ತಿತರ ವ್ಯವಸ್ಥೆ ಅಚ್ಚು ಕಟ್ಟಾಗಿ ನಿರ್ವಹಣೆ ಮಾಡಿರುವುದಕ್ಕೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಸಿಬ್ಬಂದಿಗಳ ಕೊರತೆ ನೀಗಿಸಲು ಶೀಘ್ರ ಹೊಸ ಸಿಬ್ಬಂದಿಗಳನ್ನು ನೇಮಿಸಲಾಗುವುದು ಎಂದರು.ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್.ಪಿ ರಾಜೇಂದ್ರ, ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ , ಸುಬ್ರಹ್ಮಣ್ಯ ಠಾಣಾಧಿಕಾರಿ ಕಾರ್ತಿಕ್, ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್. ಎ
ಇಂಜಾಡಿ, ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.












