ಸುಳ್ಯ:ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ವತಿಯಿಂದ ನೂತನ ಜೇನು ಚಾಕೋಲೆಟ್ ಲೋಕಾರ್ಪಣೆ ಮಾಡಲಾಯಿತು. ಮೇ.23 ರಂದು ಸುಳ್ಯದ ಶಾಸ್ತ್ರೀ ವೃತ್ತದಲ್ಲಿರುವ ಅಮೃತ ಭವನದಲ್ಲಿ ನಡೆದ ಸಮಾರಂಭದಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು

ಹನಿಬೈಟ್ ಚಾಕಲೇಟ್ ಲೋಕಾರ್ಪಣೆ ಮಾಡಿದರು.
ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಶಾಸಕಿ ಭಾಗೀರಥಿ ಮುರುಳ್ಯ, ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಅಧ್ಯಕ್ಷ ಸಹಕಾರ ರತ್ನ ಚಂದ್ರ ಕೋಲ್ಚಾರು,ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಎಂ.ಮುಸ್ತಾಫ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ಬಾಲ್ಯೋಟ್ಟು, ದ.ಕ.ಜೇನು ವ್ಯವಸಾಯಗಾರರ ಸಹಕಾರ ಸಂಘದ ವ್ಯವಸ್ಥಾಕ ನಿರ್ದೇಶಕರಾದ ತಿಮ್ಮಯ್ಯ.ಪಿ. ಹಾಗು ನಿರ್ದೇಶಕರು ಉಪಸ್ಥಿತರಿರು.