ಸುಳ್ಯ:ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ವತಿಯಿಂದ ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನಿರ್ಮಿಸಿರುವ
ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕದ ಉದ್ಘಾಟನೆ ಮೇ.23 ರಂದು ನಡೆಯಿತು. ಕೇಂದ್ರ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆಯವರು ನೂತನ

ಕಟ್ಟಡವನ್ನು ಉದ್ಘಾಟಿಸಿದರು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಶಾಸಕಿ ಭಾಗೀರಥಿ ಮುರುಳ್ಯ ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಎಂ.ಮುಸ್ತಾಫ, ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಅಧ್ಯಕ್ಷ ಸಹಕಾರ ರತ್ನ ಚಂದ್ರ ಕೋಲ್ಚಾರು, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ಬಾಲ್ಯೋಟ್ಟು, ಎಸ್.ಎನ್.ಮನ್ಮಥ, ಜೇನು ಸಹಕಾರಿ ಸಂಘದ ವ್ಯವಸ್ಥಾಪಕ ನಿರ್ದೇಶಕ ತಿಮ್ಮಯ್ಯ ಪಿ, ನಿರ್ದೇಶಕರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.


