ಬೆಂಗಳೂರು: ಮೇ 27 ರಂದು 24 ಮಂದಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರಲ್ಲಿ ಸರಕಾರ ಅಧಿಕೃತವಾಗಿ ಸಮಯ ಕೇಳಿದೆ.
ಸಿಎಂ ಆಯ್ಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆ
ಪ್ರಕ್ರಿಯೆ ಆರಂಭಗೊಂಡಿತು. ಮೇ 27 ರಂದು ರಾಜಭವನದಲ್ಲಿ 24 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮೇ 27 ರಂದು ಬೆಳಗ್ಗೆ 11:45 ಕ್ಕೆ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಶೀಘ್ರ ಕಾಂಗ್ರೆಸ್ 24 ಮಂದಿ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಿದೆ. ದೆಹಲಿಯಲ್ಲಿ ಕರ್ನಾಟಕ ಸಚಿವ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್ ನಾಯಕರು ಹಲವು ಸುತ್ತಿನ ಸಭೆ ನಡೆಸಿ ನಿರ್ಧರಿಸಲಾಗಿದೆ.