ಸುಳ್ಯ: ಸುಳ್ಯ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಅಭಿಷೇಕ್ ವಿ. ಅವರು ಸುಳ್ಯ ಕುರುಂಜಿಭಾಗ್ನಲ್ಲಿರುವ ಡಿ.ದೇವರಾಜು ಅರಸು ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯ ಹಾಗೂ ಮೆಟ್ರಿಕ್ ನಂತರದ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿನಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸ್ಟೇಲ್ಗಳಲ್ಲಿನ ಆಹಾರ, ಮತ್ತಿತರ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದ

ಅವರು ವಿದ್ಯಾರ್ಥಿನಿಯರ ಜೊತೆ ಹಾಸ್ಟೇಲ್ನಲ್ಲಿಯ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು. ಹಾಸ್ಟೇಲ್ನ ಆಹಾರ ವಿತರಣೆ ಮತ್ತಿತರ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಹಾಸ್ಟೇಲ್ಗ ವಾರ್ಡನ್ಗ ಜೊತೆ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು.
ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಹೆಚ್.ಎಂ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಜಾ ದಿನೇಶ್ ಕುಕ್ಕುಜಡ್ಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಗೀತಾ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕಿ ನಳಿನಿ, ಅಧೀಕ್ಷಕ ಶಿವಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.