ಬೆಳ್ಳಾರೆ: ಬೆಳ್ಳಾರೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯವನ್ನು ಮಂಗಳೂರಿಗೆ ಸ್ಥಳಾಂತರ ಆಗಲಿದೆ ಎಂದು ಹೇಳಲಾಗಿದ್ದು ಈ ಹಿನ್ನಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ
ಪೆರುವಾಜೆಯ ಡಾ.ಕೆ.ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೆಲೇಜಿಗೆ ಭೇಟಿ ನೀಡಿದ್ದ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಕಾಲೇಜಿನ ಮತ್ತು ಬೆಳ್ಳಾರೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು, ವಿದ್ಯಾರ್ಥಿ ನಿಲಯವನ್ನು ಸ್ಥಳಾಂತರಗೊಳಿಸದಂತೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಶಾಸಕರು ಯಾವುದೇ ಕಾರಣಕ್ಕೂ ವಿದ್ಯಾರ್ಥಿ ನಿಲಯ ಸ್ಥಳಾಂತರವಾಗದಂತೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ದಾಮೋದರ ಕಣಜಾಲು ಇದ್ದರು.