ಬೆಂಗಳೂರು:ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಟಿ.ಶ್ಯಾಂ ಭಟ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.ಈಗ ಅವರು ಆಯೋಗದ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದು, ಹೊಸ ಅಧ್ಯಕ್ಷರ ನೇಮಕ ಆಗುವವರೆಗೆ ಅಥವಾ
ಮುಂದಿನ ಆದೇಶದವರೆಗೆ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.ಶ್ಯಾಂ ಭಟ್ ಅವರು ಬಿಡಿಎ ಆಯುಕ್ತರಾಗಿ, ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕಳೆದ ನವೆಂಬರ್ ತಿಂಗಳಲ್ಲಿ ಶ್ಯಾಂ ಭಟ್ ಅವರನ್ನು ಮಾನವ ಹಕ್ಕುಗಳ ಆಯೋಗದ ಸದಸ್ಯರನ್ನಾಗಿ ನೇಮಿಸಲಾಯಿತು. ಈಗ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.