ಬೆಂಗಳೂರು: ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ.ಶ್ಯಾಮ್ ಭಟ್ ಅವರು ನೇಮಕಗೊಂಡಿದ್ದಾರೆ. ಟಿ. ಶ್ಯಾಂ ಭಟ್
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಮಾಜಿ ಅಧ್ಯಕ್ಷರಾಗಿದ್ದರು. ಐಎಎಸ್ ಅಧಿಕಾರಿಯಾಗಿದ್ದ ಟಿ. ಶ್ಯಾಂ ಭಟ್ ಅವರು ಜಿಲ್ಲಾಧಿಕಾರಿ, ಬಿಡಿಎ ಆಯುಕ್ತರು ಸೇರಿ ಹಲವು ಉನ್ನತ ಹುದ್ದೆಗಳನ್ನು ಅಲಂಕರಿಸಿ ನಿವೃತ್ತರಾಗಿದ್ದಾರೆ. ಇದೀಗ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ.














