ನವದೆಹಲಿ: ಭಾರತದ ಮೊದಲ ಜಲಜನಕ ಚಾಲಿತ ರೈಲಿನ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಹಸಿರು ನಿಶಾನೆ ತೋರಿಸಿದ್ದಾರೆ.ಈ ರೈಲು ಹರಿಯಾಣದ ಜಿಂದ್ ಮತ್ತು ಸೋನಿಪತ್ ನಡುವಿನ 89 ಕಿ.ಮೀ ಮಾರ್ಗದಲ್ಲಿ ಸಂಚರಿಸಲಿದೆ. ಈ ಮೂಲಕ ದೇಶದಲ್ಲಿ ಜಲಜನಕ ಚಾಲಿತ ರೈಲಿಗೆ ಚಾಲನೆ ದೊರೆತಿದೆ.ಜಲಜನಕ ರೈಲುಗಳನ್ನು ಹೊಂದಿರುವ ವಿಶ್ವದ ಕೆಲವೇ ಕೆಲವು ಆಯ್ದ ದೇಶಗಳ ಸಾಲಿಗೆ ಭಾರತವೂ ಸೇರಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.








