ದುಬೈ:ಚಾಂಪಿಯನ್ಸ್ ಟ್ರೋಫಿ ಗೆಲವಿನ ಬಳಿಕ ದೇಶದ ಎಲ್ಲೆಡೆ ಅಭಿಮಾನಿಗಳ ಸಂಭ್ರಮವೇ ಸಂಭ್ರಮ. ದೇಶದ, ಜಗತ್ತಿನಾದ್ಯಂತ ಇರುವ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಗೆಲುವನ್ನು ಸಂಭ್ರಮಿಸಿದರು. ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಈ ಗೆಲುವಿನ ಬಳಿಕ ಸ್ಟಂಪ್ಗಳನ್ನು ಎತ್ತಿಕೊಂಡು
ದಾಂಡಿಯಾ ನೃತ್ಯ ಮಾಡಿ ಸಂಭ್ರಮಿಸಿದರು. ಜಡೇಜ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ ಗ್ಯಾಗ್ನಂ ನೃತ್ಯ ಮಾಡಿ ಸಂಭ್ರಮಿಸಿದರು. 2024 ರ ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾವನ್ನು ಗೆಲುವಿನತ್ತ ಮುನ್ನಡೆಸಿದ್ದ ನಂತರ, ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಈಗ ಮತ್ತೆ ಟೀಂ ಇಂಡಿಯಾವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದಾರೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ, ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್ಗಳಿಂದ ಸೋಲಿಸಿ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತು. ಇದು ಕೋಟ್ಯಾಂತರ ಅಭಿಮಾನಿಗಳಿಗೆ ಸಂತಸವನ್ನು ಉಂಟು ಮಾಡಿದೆ.