ಪುಣೆ:ಏಕದಿನ ವಿಶ್ಚಕಪ್ನಲ್ಲಿ ಇಂದು ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ನಡುವೆ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸೆಮಿಫೈನಲ್ ಹಾದಿ ಜೀವಂತವಾಗಿರಲಿದೆ. ಇಲ್ಲಿಯವರೆಗೆ ಉಭಯ ತಂಡಗಳು ತಲಾ 2 ಪಂದ್ಯಗಳನ್ನು ಗೆದ್ದಿದ್ದು, ತಲಾ ನಾಲ್ಕು ಅಂಕಗಳನ್ನು ಹೊಂದಿವೆ. ಆದರೆ ಉತ್ತಮ ನೆಟ್ ರನ್ ರೇಟ್ನಿಂದಾಗಿ ಶ್ರೀಲಂಕಾ ಅಂಕಪಟ್ಟಿಯಲ್ಲಿ ಐದನೇ
ಸ್ಥಾನದಲ್ಲಿದ್ದರೆ, ಅಫ್ಘಾನಿಸ್ತಾನ ತಂಡ ಏಳನೇ ಸ್ಥಾನದಲ್ಲಿದೆ. ಉಭಯ ತಂಡಗಳ ನಡುವಿನ ಆರನೇ ಪಂದ್ಯ ಇದಾಗಿದ್ದು, ವಿಜೇತ ತಂಡವು ಒಟ್ಟು 6 ಅಂಕಗಳೊಂದಿಗೆ ಸೆಮಿಫೈನಲ್ಗೆ ಇನ್ನಷ್ಟು ಹತ್ತಿರವಾಗಲಿದೆ. ಹಾಗೆಯೇ ಸೋತ ತಂಡಕ್ಕೆ ಸೆಮಿಸ್ ಹಾದಿ ಮತ್ತಷ್ಟು ಕಠಿಣವಾಗಲಿದೆ. ಅಫ್ಘಾನಿಸ್ತಾನವು ಇಂಗ್ಲೆಂಡ್ ಮತ್ತು ಪಾಕಿಸ್ತಾನದಂತಹ ದಿಗ್ಗಜ ತಂಡಗಳನ್ನು ಸೋಲಿಸಿದೆ.
ತಂಡಗಳು:
ಶ್ರೀಲಂಕಾ: ಪಾತುಮ್ ನಿಸಂಕ, ಕುಸಾಲ್ ಪೆರೇರಾ, ಕುಸಲ್ ಮೆಂಡಿಸ್ (ನಾಯಕ/ವಿಕೆಟ್ ಕೀಪರ್) ಸದಿರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ್ ಡಿ ಸಿಲ್ವಾ, ಏಂಜೆಲೊ ಮ್ಯಾಥ್ಯೂಸ್, ಮಹೇಶ್ ತಿಕ್ಷಣ, ಕಸುನ್ ರಜಿತಾ, ದುಷ್ಮಂತ ಚಮೀರಾ, ದಿಲ್ಶನ್ ಮಧುಶಂಕ.
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ರಹಮತ್ ಷಾ, ಹಶಮತುಲ್ಲಾ ಶಾಹಿದಿ (ನಾಯಕ), ಅಜ್ಮತುಲ್ಲಾ ಉಮರ್ಜಾಯ್, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನವೀನ್-ಉಲ್-ಹಕ್, ನೂರ್ ಅಹ್ಮದ್.