ಮಂಗಳೂರು:ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ. ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು
ಪಕ್ಷದ ಬಾವುಟ ನೀಡಿ ಅವರನ್ನು ಸ್ವಾಗತಿಸಿದರು.ಈ ವೇಳೆ ಮಾತನಾಡಿದ ವಿನಯ ಕುಮಾರ್ ಸೊರಕೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸುವಂತೆ ಕರೆ ನೀಡಿದರು. ಜೆಡಿಎಸ್ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಇಕ್ಬಾಲ್ ಎಲಿಮಲೆ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ಕಾಂಗ್ರೆಸ್ಗೆ ಸೇರ್ಪಡೆಯಾದರು. ಸುಳ್ಯ ನ.ಪಂ.ಸದಸ್ಯ ಕೆ.ಎಸ್.ಉಮ್ಮರ್ ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್, ಮುಖಂಡರಾದ ಜಿ.ಕೃಷ್ಣಪ್ಪ, ಸದಾನಂದ ಮಾವಜಿ ಸೇರಿ ಸುಳ್ಯದ ಪ್ರಮುಖರು ಉಪಸ್ಥಿತರಿದ್ದರು.