ದಾವಣಗೆರೆ: ತಮ್ಮ ಕ್ಷೇತ್ರದಲ್ಲಿ ಚುನಾವಣೆ ಮುಗಿದ ಬಳಿಕ ಹಲವು ಮುಖಂಡರು ಮುಂದಿನ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಪ್ರಚಾರಕ್ಕೆ ತೆರಳುತ್ತಾರೆ. ಸುಳ್ಯದ ಹಲವು ಮುಖಂಡರು ವಿವಿಧ ಕ್ಷೇತ್ರಗಳಲ್ಲಿ
ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಮುಖಂಡ ಮಹಮ್ಮದ್ ಇಕ್ಬಾಲ್ ಎಲಿಮಲೆ ನೇತೃತ್ವದ ತಂಡ
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್.ಮಲ್ಲಿಕಾರ್ಜುನ ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪರವಾಗಿ ದಾವಣಗೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದರು. ಮಹಮ್ಮದ್ ಇಕ್ಬಾಲ್ ಎಲಿಮಲೆ, ಸಿದ್ದೀಕ್ ಜೀರ್ಮುಖಿ, ಫೈಝಲ್ ಜೀರ್ಮುಖಿ, ಹನೀಫ್ ಮೆತಡ್ಕ ಮೊದಲಾದವರು ಇದ್ದರು.