ಸುಳ್ಯ:ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ತ್ ಪುತ್ತೂರು ಅ.28 ರಂದು ನಡೆಸುವ ಪ್ರತಿಭಟನೆಗೆ ಬೆಂಬಲ ಸೂಚಿಸುವುದಾಗಿ ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟದ ಸಂಚಾಲಕ ಮಹಮ್ಮದ್ ಇಕ್ಬಾಲ್ ಎಲಿಮಲೆ ತಿಳಿಸಿದ್ದಾರೆ.ಕಾಣಿಯೂರಿನಲ್ಲಿ ಬೆಡ್ಶೀಟ್ ವ್ಯಾಪಾರಸ್ಥರ ಮೇಲೆ ನಡೆಸಿದ ಹಲ್ಲೆಯನ್ನು ಖಂಡಿಸುವುದಾಗಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಘಟನೆಯ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.
previous post