ಸುಳ್ಯ:ಪಯಸ್ವಿನಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಜ.1ರಂದು ರಾತ್ರಿ ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ದ್ವಾರದ ಬಳಿ ಟಿಪ್ಪರ್ ಲಾರಿಯಲ್ಲಿ
ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದುದನ್ನು ಸುಳ್ಯ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ(ತನಿಖೆ) ಸರಸ್ವತಿ ಬಿ ಟಿ ಹಾಗೂ ಸಿಬ್ಬಂದಿಗಳ ತಂಡ ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಮರಳನ್ನು ಯಾವುದೇ ಪರವಾನಿಗೆಯಿಲ್ಲದೆ ಮಂಡೆಕೋಲಿನ ಪಯಸ್ವಿನಿ ನದಿಯಿಂದ ಲೋಡ್ ಮಾಡಿಕೊಂಡು ಸುಳ್ಯ ಕಡೆಗೆ ಸಾಗಿಸಲಾಗುತ್ತಿತ್ತು. ಅಂದಾಜು ರೂ 2 ಲಕ್ಷ ರೂಪಾಯಿ ಮೌಲ್ಯದ ಲಾರಿ ಹಾಗೂ 5000/-ಸಾವಿರ ರೂ ಮೌಲ್ಯದ ಮರಳಿನೊಂದಿಗೆ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.





