ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರ ಸಾಧನೆಯ ಹಾದಿಯಲ್ಲಿ ಕಿರು ಹೊತ್ತಿಗೆಯನ್ನು ಸಿಂಗಾಪುರದ ಸ್ಟ್ಯಾಂಡರ್ಡ್ ಚಾರ್ಟೆಡ್ ಬ್ಯಾಂಕ್ ನಿರ್ದೇಶಕಿ ಅನಿತಾ ಜಗದೀಶ್ ಬಿಡುಗಡೆ ಗೊಳಿಸಿದರು.ಸಿಂಗಾಪುರದ ಪ್ಲ್ಯೂಮೆ ಕಾನ್ಫರೆನ್ಸ್ ಹಾಲ್ ನಲ್ಲಿ ನಡೆದ 49 ನೇ ಅಂತಾರಾಷ್ಟ್ರೀಯ
ಸಾಂಸ್ಕೃತಿಕ ಉತ್ಸವದಲ್ಲಿ ಕಿರು ಹೊತ್ತಿಗೆ ಬಿಡುಗಡೆ ಗೊಳಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮಾತನಾಡಿ ಮಂಗಳೂರು ಕೂಡಾ ಸಿಂಗಾಪುರ ಮಾದರಿಯಲ್ಲಿ ಅಭಿವೃದ್ಧಿ ಯಾಗಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಿಂಗಾಪುರ ಕನ್ನಡ ಸಂಘದ ಮಾಜಿ ಕಾರ್ಯದರ್ಶಿ ಗೋಪಾಲ್, ಇಂಟರ್ನ್ಯಾಷನಲ್ ಕಲ್ಚರಲ್ ಫೆಸ್ಟ್ ಕೌನ್ಸಿಲ್ ಒಫ್ ಇಂಡಿಯಾ ಅಧ್ಯಕ್ಷ ಮಂಜುನಾಥ್ ಸಾಗರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.