ಸುಳ್ಯ: ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು.
ಸುಳ್ಯ ತಹಶೀಲ್ದಾರ್ ಎಂ.ಮಂಜುನಾಥ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯ ದಿನದ ಸಂದೇಶ ನೀಡಿದರು.
ಬಳಿಕ ಆಕರ್ಷಕ
ಪಥವಸಂಚಲನ ನಡೆಯಿತು. ಪೊಲೀಸ್, ಹೊಂ ಗಾರ್ಡ್ಸ್, ಮಾಜಿ ಸೈನಿಕರು, ಎನ್ಸಿಸಿ, ಸ್ಕೌಟ್ಸ್ ಗೈಡ್ಸ್ ಹಾಗೂ ಶಾಲಾ ವಿದ್ಯಾರ್ಥಿಗಳ ತಂಡಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ತಹಶೀಲ್ದಾರ್ ಮಂಜುನಾಥ್ ಗೌರವ ವಂದನೆ ಸ್ವೀಕರಿಸಿದರು.
ಭಾರತದ ಅಸ್ಮಿತೆ ಉಳಿಸಬೇಕು- ತಹಶೀಲ್ದಾರ್ ಎಂ.ಮಂಜುನಾಥ:
ಸ್ವಾತಂತ್ರ್ಯ ಸಂದೇಶ ನೀಡಿದ ತಹಶೀಲ್ದಾರ್ ಎಂ.ಮಂಜುನಾಥ. ಹಲವಾರು ಹೋರಾಟಗಳ ಮೂಲಕ ಅನೇಕ ಚಳವಳಿಗಳ ಮೂಲಕ ಪಡೆದ ನಮ್ಮ ಸ್ವಾತಂತ್ರ್ಯ, ಪ್ರಜಾಪ್ರಭುತ್ವವನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ. ದೇಶಕ್ಕಾಗಿ ಹೋರಾಟ ನಡೆಸಿದ ಸ್ವಾತಂತ್ರ್ಯ ಹೋರಾಟಗಾರರ ಸ್ಮರಿಸುವುದು ನಮ್ಮೆಲ್ಲರ ಹೆಮ್ಮೆ ಎಂದು ಅವರು ಹೇಳಿದರು.
ಶಾಸಕಿ ಭಾಗೀರಥಿ ಮುರುಳ್ಯ ಸಮಾರಂಭದ ಅಧ್ಯಕ್ಷತೆ ವಹಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಎಂ.ವೆಂಕಪ್ಪ ಗೌಡ, ಬುದ್ಧ ನಾಯ್ಕ್, ಸುಧಾಕರ ಕುರುಂಜಿಭಾಗ್ ಸರೋಜಿನಿ ಪೆಲ್ತಡ್ಕ, ಶೀಲಾ ಅರುಣ ಕುರುಂಜಿ, ಕಿಶೋರಿ ಶೇಠ್, ಪೂಜಿತಾ ಕೆ.ಯು, ಶಿಲ್ಪಾ ಸುದೇವ್, ಶಶಿಕಲಾ ನೀರಬಿದಿರೆ, ಪ್ರವಿತಾ ಪ್ರಶಾಂತ್, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಹೆಚ್.ಎಂ., ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್, ಆರಕ್ಷಕ ಉಪನಿರೀಕ್ಷಕ ಈರಯ್ಯ ದೂಂತೂರು, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಗೌಡ ಬೊಮ್ಮೆಟ್ಟಿ, ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಿವೃತ್ತ ಸೈನಿಕರಾದ ವೀರಪ್ಪ ಗೌಡ ಕೆ ಅವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಾದ ಸೃಷ್ಠಿ ಎಸ್. ಹಾಗೂ ಖುಷಿ ‘ನನ್ನ ದೇಶ ನನ್ನ ಮಣ್ಣು’ ಎಂಬ ವಿಷಯದ ಬಗ್ಗೆ ಮಾತನಾಡಿದರು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ ವಂದಿಸಿದರು. ಶಿಕ್ಷಕಿ ಮಮತ ಎಸ್.ಕೆ ಹಾಗು ಶಿಕ್ಷಣ ಸಂಯೋಜಕ ನಳಿನಿ ಕಾರ್ಯಕ್ರಮ ನಿರೂಪಿಸಿದರು.