ಸುಳ್ಯ:ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನ ಸ್ವಾತಂತ್ರ್ಯ ದಿನಾಚರಣೆ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಿತು. ಮಾಜಿ ಅಂತಾರಾಷ್ಟ್ರೀಯ ರಗ್ಬಿ ಆಟಗಾರ ಹಾಗೂ ಪ್ರಗತಿ ಸಂಸ್ಥೆಯ ಪ್ರೊಪ್ರೇಟರ್ ಮಾದಂಡ ತಿಮ್ಮಯ್ಯ ಅತಿಥಿಗಳಾಗಿದ್ದರು. ಅಮರಜ್ಯೋತಿ ಸ್ಕಾಲರ್ಷಿಪ್ ಎಕ್ಸಾಮಿನೇಷನ್ ರಿಜಿಸ್ಟ್ರೇಷನ್ ಲಿಂಕ್ಅನ್ನು ಅವರು
ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ವಹಿಸಿದ್ದರು. ಮಾದಂಡ ತಿಮ್ಮಯ್ಯ ಅವರನ್ನು ಸನ್ಮಾನಿಸಲಾಯಿತು
ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ , ಕೆವಿಜಿ ಐಪಿಎಸ್ ನ ಪ್ರಾಂಶುಪಾಲರಾದ ಅರುಣ್ ಕುಮಾರ್ ಉಪಪ್ರಾಂಶುಪಾಲರಾದ ಶಿಲ್ಪಾ ಬಿದ್ದಪ್ಪ,ಕೆವಿಜಿ ಐಟಿಐ ನ ಪ್ರಾಂಶುಪಾಲರಾದ ಚಿದಾನಂದ ಬಾಳಿಲ, ಕೆವಿಜಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ಶ್ರೀಧರ್ ಎಂ.ಕೆ ಹಾಗೂ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.ಮುಖ್ಯ ಅತಿಥಿಗಳ ಪರಿಚಯವನ್ನು ವಿದ್ಯಾರ್ಥಿನಿ ಅಮೂಲ್ಯ ನೆರವೇರಿಸಿದರು. ವಿದ್ಯಾರ್ಥಿನಿ ಖುಷಿ ಸ್ವಾಗತಿಸಿದರು. ಉಪನ್ಯಾಸಕಿ ಮಲ್ಲಿಕಾ ಎಂ ಎಲ್,ವಿದ್ಯಾರ್ಥಿ ಸಾನ್ವಿ ಮತ್ತು ಪ್ರತಿಜ್ಞಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ತನ್ವಿ ವಂದಿಸಿದರು. ದಿನದ ವಿಶೇಷತೆ ಬಗ್ಗೆ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಜನನಿ ಮಾತನಾಡಿದರು. ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಗೀತೆ ನೃತ್ಯವನ್ನು ಮತ್ತು ಕೆವಿಜಿ ಐಪಿಎಸ್ ನ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಗೀತೆ ನಡೆಯಿತು.