ಸುಳ್ಯ:ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಸರಕಾರಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಿತು. ತಹಶೀಲ್ದಾರ್ ಜಿ.ಮಂಜುನಾಥ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯದ ಸಂದೇಶ ನೀಡಿದರು. ಭಾರತ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಹೋರಾಟಗಾರರ ತ್ಯಾಗ ಬಲಿದಾನವನ್ನು ಗೌರವಪೂರ್ಣವಾಗಿ
ಸ್ಮರಿಸುತ್ತೇವೆ. ಸ್ವಾತಂತ್ರ್ಯಾ ನಂತರ ಎಲ್ಲಾ ಕ್ಷೇತ್ರಗಳಲ್ಲಿ ಭಾರತ ಅದ್ಭುತ ಸಾಧನೆ ಮಾಡಿದೆ.1947ರ ಸಂದರ್ಭದಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರ ಎಂಬುದು ನಮ್ಮ ಕಲ್ಪನೆ ಎಂದು ಅವರು ಹೇಳಿದರು. ಭೂಮಿ ಹಾಗೂ ಪರಿಸರವನ್ನು ಉಳಿಸುವ ಮೂಲಕ ಭಾರತವನ್ನು ಉಳಿಸುವುದು ನಮ್ಮ ಆದ್ಯ ಕರ್ತವ್ಯವಾಗಬೇಕು. ಹಸಿರು ಭಾರತ ನಿರ್ಮಾಣ ನಮ್ಮ ಆದ್ಯತೆಯಾಗಬೇಕು ಎಂದು ಅವರು ಹೇಳಿದರು.
ಶಾಸಕಿ ಭಾಗೀರಥಿ ಮುರುಳ್ಯ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಅಕಾಡೆಮಿ ಆಫ್ ಲಿವರಲ್ ಎಜ್ಯುಕೇಷನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್.ಯು.ಕೆ, ಎಸ್ಐ ಈರಯ್ಯ ದೂಂತೂರು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್, ನ.ಪಂ.ಮುಖ್ಯಾಧಿಕಾರಿ ಸುಧಾಕರ ಎಂ.ಎಚ್.
ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ ಗೌಡ, ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ನಗರ ಪಂಚಾಯತ್ ಸದಸ್ಯರಾದ ಎಂ.ವೆಂಕಪ್ಪ ಗೌಡ, ವಿನಯಕುಮಾರ್ ಕಂದಡ್ಕ, ಶರೀಫ್ ಕಂಠಿ, ರಾಜು ಪಂಡಿತ್, ಸಿದ್ದಿಕ್ ಕೊಕ್ಕೊ, ಶಶಿಕಲಾ ನೀರಬಿದಿರೆ, ಕಿಶೋರಿ ಶೇಟ್, ಪೂಜಿತಾ, ಶಿಲ್ಪಾ ಮತ್ತಿತರರು ಉಪಸ್ಥಿತರಿದ್ದರು. ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಕರ್ಷಕ ಪಥ ಸಂಚಲನ ನಡೆಯಿತು. ಪೋಲೀಸ್, ಹೋಂಗಾರ್ಡ್, ಎನ್ಸಿಸಿ, ಎನ್ಎಸ್ಎಸ್, ಸ್ಕೌಟ್ಸ್, ಗೈಡ್ಸ್ , ಶಾಲಾ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನದಲ್ಲಿ ಭಾಗವಹಿಸಿದ್ದರು.