ಸುಳ್ಯ: ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಸುಳ್ಯ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ತಹಶೀಲ್ದಾರ್ ಮಂಜುಳ ಎಂ. ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಸ್ವಾತಂತ್ರ್ಯೋತ್ಸವ ಪ್ರಯುಕ್ತ
ಆಕರ್ಷಕ ಪಥ ಸಂಚಲನ ನಡೆಯಿತು. ಪೊಲೀಸ್, ಮಾಜಿ ಸೈನಿಕರ ಸಂಘ, ಗೃಹ ರಕ್ಷಕ ದಳ, ಎನ್ಸಿಸಿ, ಸ್ಕೌಟ್ಸ್ & ಗೈಡ್ಸ್, ಬುಲ್ ಬುಲ್ ತಂಡಗಳು, ಯುವ ರೆಡ್ ಕ್ರಾಸ್, ಸೇವಾ ದಳ, ಹಾಗೂ ಶಾಲಾ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಎಸ್ಐ ಕೃಷ್ಣ ಜಿ.ಬಿ ಪಥ ಸಂಚಲನದ ನೇತೃತ್ಬ ವಹಿಸಿದ್ದರು. ತಾರಾನಾಥ ಎಎಸ್ಐ ಪೆರೇಡ್ ಕಮಾಂಡರ್

ಆಗಿದ್ದರು.ಶಾಸಕಿ ಭಾಗೀರಥಿ ಮುರುಳ್ಯ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ
ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಸುಳ್ಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ತಾಲೂಕು

ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್.ಹರಗಿ,, ಸರ್ಕಲ್ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ್, ಎಸ್ಐ ಸಂತೋಷ್ ಬಿ.ಪಿ,ನಗರ ಪಂಚಾಯತ್ ಮುಖ್ಯಾಧಿಕಾರಿ ಬಸವರಾಜ್, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಗೌಡ ಬೊಮ್ಮೆಟ್ಟಿ, ಡಾ.ನಿತಿನ್ ಪ್ರಭು, ಗುರುಪ್ರಸಾದ್ ಎಂ.ಎಸ್, ಪ್ರಮೋದ್ ಕುಮಾರ್ ಸಿ.ಎಂ. ಮತ್ತಿತರರು ಉಪಸ್ಥಿತರಿದ್ದರು.








































