ಶಿವಮೊಗ್ಗ:ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಪುತ್ರನಿಗೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಸಿಗದಿರುವ ಕಾರಣಕ್ಕೆ
ಮುನಿಸಿಕೊಂಡಿರುವ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಶುಕ್ರವಾರ ಇಲ್ಲಿ ಬೆಂಬಲಿಗರು, ಅಭಿಮಾನಿಗಳಿಂದ ಅಭಿಪ್ರಾಯ ಸಂಗ್ರಹಣಾ ಸಭೆ ನಡೆಸಿದ ಅವರು, ಕೊನೆಯಲ್ಲಿ ಈ ನಿರ್ಧಾರ ಪ್ರಕಟಿಸಿದರು.
ಪ್ರಧಾನಿ ನರೆಂದ್ರ ಮೋದಿ ಅವರ ಪರವಾಗಿ ಚುನಾವಣೆಗೆ ನಿಲ್ಲುತ್ತಿರುವೆ. ಇದು ಉದ್ವೇಗದಲ್ಲಿ ಕೈಗೊಳ್ಳುತ್ತಿರುವ ತೀರ್ಮಾನ ಅಲ್ಲ. ಸಿದ್ಧಾಂತ ಉಳಿಸಬೇಕು. ಮತ್ತೊಂದು ಕಾಂಗ್ರೆಸ್ ಪಕ್ಷ ಆಗದಂತೆ ಬಿಜೆಪಿಯನ್ನು ತಡೆಯಬೇಕು ಎಂದು ಸ್ಪರ್ಧೆ ಮಾಡುತ್ತಿದ್ದೇನೆ ಎಂದರು.









