ಕಾನ್ಪುರ:ಭಾರತ ಮತ್ತು ಆಸ್ಟ್ರೇಲಿಯಾ ಎ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್ನಲ್ಲಿ ನಡೆಯಿತು. ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ಎ ತಂಡವು ಅದ್ಭುತ ಪ್ರದರ್ಶನ ನೀಡಿ 171 ರನ್ ಅಂತರದಲ್ಲಿ ಏಕಪಕ್ಷೀಯವಾಗಿ ಪಂದ್ಯವನ್ನು ಗೆದ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಎ ತಂಡವು ಪ್ರಿಯಾಂಶ್ ಆರ್ಯ ಹಾಗೂ
ಶ್ರೇಯಸ್ ಅಯ್ಯರ್ ಅವರ ಶತಕದ ಆಧಾರದ ಮೇಲೆ 413 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ242 ರನ್ಗಳಿಗೆ ಆಲೌಟ್ ಆಯಿತು.ಇದರೊಂದಿಗೆ, ಭಾರತ ಎ ತಂಡವು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಎ ತಂಡ ಪ್ರಿಯಾಂಶ್ ಆರ್ಯ ಮತ್ತು ಶ್ರೇಯಸ್ ಅಯ್ಯರ್ ಅವರ ಶತಕಗಳ ನೆರವಿನಿಂದ 50 ಓವರ್ಗಳಲ್ಲಿ 6 ವಿಕೆಟ್ಗಳ ನಷ್ಟಕ್ಕೆ 413 ರನ್ ಗಳಿಸಿತು. ಪ್ರಿಯಾಂಶ್ ಆರ್ಯ 84 ಎಸೆತಗಳಲ್ಲಿ 11 ಬೌಂಡರಿ ಮತ್ತು 5 ಸಿಕ್ಸರ್ಗಳನ್ನು ಒಳಗೊಂಡಂತೆ 101 ರನ್ ಬಾರಿಸಿದರೆ, ಶ್ರೇಯಸ್ ಅಯ್ಯರ್ 83 ಎಸೆತಗಳಲ್ಲಿ 12 ಬೌಂಡರಿ ಮತ್ತುಸಿಕ್ಸರ್ಗಳೊಂದಿಗೆ 110 ರನ್ ಗಳಿಸಿದರು.ಆರಂಭಿಕ ಪ್ರಭ್ಸಿಮ್ರನ್ ಸಿಂಗ್ ಕೂಡ 53 ಎಸೆತಗಳಲ್ಲಿ 56 ರನ್, ರಿಯಾನ್ ಪರಾಗ್ 42 ಎಸೆತಗಳಲ್ಲಿ 67 ರನ್ ಬಾರಿಸಿದರೆ, ಆಯುಷ್ ಬಡೋನಿ 27 ಎಸೆತಗಳಲ್ಲಿ 50 ರನ್ ಗಳಿಸಿ ತಂಡವನ್ನು 400 ರನ್ಗಳ ಗಡಿ ದಾಟಿಸಿದರು.












