ಮುಂಬೈ: ವಿಶ್ವಕಪ್ ಟೂರ್ನಿಯ ಭಾರತ ಎದುರಿನ ಪಂದ್ಯದಲ್ಲಿ ಶ್ರೀಲಂಕಾ ಟಾಸ್ ಜಯಿಸಿ ಫೀಲ್ಡಿಂಗ್ ಆಯ್ದುಕೊಂಡಿದೆ. ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ಬ್ಯಾಟಿಂಗ್ ಆರಂಭಿಸಿದೆ. ಮೊದಲ ಓವರ್ನಲ್ಲಿ ಭಾರತಕ್ಕೆ ಆಘಾತ ಎದುರಾಗಿದೆ. ನಾಲ್ಕು ರನ್ ಗಳಿಸಿದ
ನಾಯಕ ರೋಹಿತ್ ಶರ್ಮ ಔಟ್ ಆಗಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ಶುಭ್ಮನ್ ಗಿಲ್ ಕ್ರೀಸಿನಲ್ಲಿದ್ದಾರೆ.
ಸತತ ಆರು ಪಂದ್ಯಗಳಲ್ಲಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತಕ್ಕೆ ಸೆಮಿ ಫೈನಲ್ನಲ್ಲಿ ಸ್ಥಾನ ಗಿಟ್ಟಿಸಲು ಇನ್ನೊಂದು ಪಂದ್ಯ ಗೆಲ್ಲಬೇಕಾಗಿದೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯ ಆಡಿದ ತಂಡವನ್ನೇ ಉಳಿಸಿಕೊಂಡಿದೆ.









