ಲಕ್ನೊ: ವಿಶ್ವಕಪ್ನ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿದೆ. ಅಟಲ್ ಬಿಹಾರಿ ವಾಜಪೇಯಿ ಏಕಾನ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ಬ್ಯಾಟಿಂಗ್ ಆರಂಭಿಸಿದೆ. ಭಾರತ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕೆ
ಇಳಿಸಿದೆ. ಯಾವುದೇ ಬದಲಾವಣೆ ಮಾಡಿಲ್ಲ. ಭಾರತ 6 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 27 ರನ್ ಗಳಿಸಿದೆ.
ನಾಯಕ ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಕ್ರೀಸಿನಲ್ಲಿದ್ದಾರೆ. 9 ರನ್ ಗಳಿಸಿದ ಶುಭ್ಮನ್ ಗಿಲ್ ಔಟ್ ಆಗಿದ್ದಾರೆ.
ಭಾರತವು ಈವರೆಗೆ ತಾನು ಆಡಿರುವ ಎಲ್ಲಾ ಐದು ಲೀಗ್ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಅದೇ ವೇಳೆ, ಹಾಲಿ ಚಾಂಪಿಯನ್ ಇಂಗ್ಲೆಂಡ್ ಈ ಪಂದ್ಯಾವಳಿಯಲ್ಲಿ ತಾನಾಡಿದ ಐದು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಗೆದ್ದಿದೆ.