ಕೋಲ್ಕತ್ತ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಭರ್ಜರಿ ಆರಂಭ ಪಡೆದಿರುವ ಭಾರತ 5 ಓವರ್ನಲ್ಲಿ ವಿಕೆಟ್ ನಷ್ಟವಿಲ್ಲದೆ 61 ರನ್ ಗಳಿಸಿದೆ.ಟೂರ್ನಿಯಲ್ಲಿ ಸತತ ಏಳು ಗೆಲುವು ದಾಖಲಿಸಿರುವ
ಟೀಮ್ ಇಂಡಿಯಾದಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ.ಟೂರ್ನಿಯಲ್ಲಿ ಒಂದೂ ಪಂದ್ಯ ಸೋಲದೇ ಸೆಮಿಫೈನಲ್ ಪ್ರವೇಶಿಸಿರುವ ಭಾರತದ ತಂಡ ಮತ್ತು ಆಡಿದ ಪ್ರತಿ ಪಂದ್ಯದಲ್ಲಿಯೂ ರನ್ಗಳ ಹೊಳೆ ಹರಿಸುತ್ತಿರುವ ಹರಿಣಗಳ ಮಧ್ಯೆ ರೋಚಕ ಪಂದ್ಯ ನಡೆಯುತಿದೆ.ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾರತ ಮತ್ತು ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ತಂಡಗಳು ಮಧ್ಯೆ ಪಂದ್ಯ ಕುತೂಹಲ ಕೆರಳಿಸಿದೆ.
ಭಾರತ ಪ್ಲೇಯಿಂಗ್ ಇಲೆವೆನ್ ಇಂತಿದೆ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್, ರವೀಂದ್ರ ಜಡೇಜ, ಜಸ್ಪ್ರೀತ್ ಬೂಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.









