ಬೆಂಗಳೂರು:ವಿಶ್ವಕಪ್ 2023 ರ ಕೊನೆಯ ಲೀಗ್ ಪಂದ್ಯ ಇಂದು ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದ ಟಾಸ್ ಗೆದ್ದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಭಾರತಕ್ಕೆ
ಭರ್ಜರಿ ಆರಂಭ ದೊರೆತಿದೆ. 15 ಓವರ್ ಮುಕ್ತಾಯಕ್ಕೆ ಭಾರತ ಒಂದು ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿದೆ. ನಾಯಕ ರೋಹಿತ್ ಶರ್ಮ ಹಾಗೂ ಶುಭ್ಮನ್ ಗಿಲ್ ಸ್ಫೋಟಕ ಆರಂಭ ಒದಗಿಸಿದ್ದಾರೆ. 32 ಎಸೆತಗಳಲ್ಲಿ 51 ರನ್ ಗಳಿಸಿದ ಶುಭ್ಮನ್ ಗಿಲ್ ಔಟ್ ಆಗಿದ್ದಾರೆ. 48 ಎಸೆತಗಳಲ್ಲಿ 60 ರನ್ ಗಳಿಸಿದ ನಾಯಕ ರೋಹಿತ್ ಶರ್ಮ ಹಾಗೂ 5 ರನ್ರ್ ಗಳಿಸಿದ ವಿರಾಟ್ ಕೊಹ್ಲಿ ಕ್ರೀಸಿನಲ್ಲಿದ್ದಾರೆ.ಈ ಟೂರ್ನಿಯಲ್ಲಿ ಭಾರತ ತಂಡ ತನ್ನ ಅಜೇಯ ಓಟವನ್ನು ಮುಂದುವರೆಸಿದ್ದು, ಸತತ ಒಂಬತ್ತನೇ ಗೆಲುವು ಸಾಧಿಸಲು ಸಜ್ಜಾಗಿದೆ. ಇತ್ತ ಟೂರ್ನಿಯಿಂದ ಈಗಾಗಲೇ ಹೊರಬಿದ್ದಿರುವ ನೆದರ್ಲೆಂಡ್ಸ್ ತಂಡ ಭರ್ಜರಿ ಪ್ರದರ್ಶನದೊಂದಿಗೆ ವಿಶ್ವಕಪ್ ಅಭಿಯಾನ ಮುಗಿಸುವ ಇರಾದೆಯೊಂದಿಗೆ ಕಣಕ್ಕೆ ಇಳಿದಿದೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.









