ಇಂದೋರ್: ಅಫ್ಗಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡ ಅಫ್ಗಾನಿಸ್ತಾನ ವಿರುದ್ಧ 6 ವಿಕೆಟ್ಗಳ ಜಯ ದಾಖಲಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ ಭಾರತ 2-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ.ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟ್ ಮಾಡಿದ ಅಫ್ಗಾನಿಸ್ತಾನ
20 ಓವರ್ಗಳಲ್ಲಿ 172ರನ್ಗಳಿಗೆ ಆಲೌಟ್ ಆಯಿತು. ಅಫ್ಗಾನಿಸ್ತಾನ ಪರ ಗುಲ್ಬದೀನ್ 57ರನ್ಗಳಿಸಿದರು ಭಾರತದ ಪರ ಅರ್ಷದೀಪ್ 3 ವಿಕೆಟ್ ಪಡೆದರು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡ 15.3 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಭಾರತದ ಪರ ಯಶಸ್ವಿ ಜೈಸ್ವಾಲ್ 34 ಎಸೆತಗಳಲ್ಲಿ 5 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್ ನೆರವಿನಿಂದ 68 ರನ್ ಬಾರಿಸಿದರು. ಶಿವಂ ದುಬೆ 32 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ 63 ರನ್ ಗಳಿಸಿದರು. ವಿರಾಟ್ ಕೊಹ್ಲಿ 16 ಎಸೆತಗಳಲ್ಲಿ 5 ಬೌಂಡರಿ ಸಹಿತ 29 ರನ್ ಭಾರಿಸಿದರು.









