ತಿರುವನಂತಪುರಂ: ಆಸ್ಟ್ರೇಲಿಯ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ 44 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ.ಈ ಮೂಲಕ ಯುವ ಆಟಗಾರರನ್ನು ಒಳಗೊಂಡ ಟೀಂ ಇಂಡಿಯಾ 5 ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಪಡೆದಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 235 ರನ್ ಗಳಿಸಿತ್ತು.ಬೃಹತ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ
20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಆಸ್ಟ್ರೇಲಿಯಾ ಪರ ಮಾರ್ಕಸ್ ಸ್ಟೋಯಿನಿಸ್(45), ಮಾತ್ಯು ವೇಡ್(42), ಟಿಂ ಡೇವಿಡ್(37) ಹೋರಾಟ ನಡೆಸಿದರೂ ಭಾರತ ನೀಡಿದ ಬೃಹತ್ ಮೊತ್ತದ ಸವಾಲನ್ನು ಮೀರಿ ನಿಲ್ಲಲು ಸಾಧ್ಯವಾಗಿಲ್ಲ. ಭಾರತದ ಪರ ರವಿ ಬಿಸ್ಣೋಯ್ ಹಾಗೂ ಪ್ರಸಿದ್ಧ ಕೃಷ್ಣ ತಲಾ 3 ವಿಕೆಟ್ ಕಿತ್ತರು. ಮೊದಲು ಬ್ಯಾಟ್ ಮಾಡಿದ ಭಾರತದ ಪರ ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್ ಸಿಡಿಲಬ್ವರದ ಬ್ಯಾಟಿಂಗ್ ಪ್ರದರ್ಶಿಸಿ ಭಾರತಕ್ಕೆ ಬೃಹತ್ ಮೊತ್ತ ಪೇರಿಸಲು ನೆರವಾದರು.
ಸ್ಫೋಟಕ ಬ್ಯಾಟಿಂಗ್ ನಡೆಸಿದ
ಯಶಸ್ವಿ ಜೈಸ್ವಾಲ್ 25 ಎಸೆತಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 52 ರನ್ ಗಳಿಸಿದರೆ, ರಿಂಕು ಸಿಂಗ್ ಕೇವಲ 9 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ಅಜೇಯ 31 ರನ್ ಚಚ್ಚಿದರು. ಋತುರಾಜ್ ಗಾಯಕ್ವಾಡ್, ಇಸಾನ್ ಕಿಶನ್ ಅರ್ಧ ಶತಕ ಸಿಡಿಸಿದರು. ಗಾಯಕ್ವಾಡ್ 43 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 58 ರನ್ ಬಾರಿಸಿದರೆ, ಇಸಾನ್ ಕಿಶನ್ 32 ಎಸೆತಗಳಲ್ಲಿ 3 ಬೌಂಡರಿ 4 ಸಿಕ್ಸರ್ ನೆರವಿನಿಂದ 52 ರನ್ ಬಾರಿಸಿದರು.ನಾಯಕ ಸೂರ್ಯಕುಮಾರ್ ಯಾದವ್ 10 ಎಸೆತದಲ್ಲಿ 2 ಸಿಕ್ಸರ್ ಸಹೀತ 19 ರನ್ ಗಳಿಸಿದರು. ತಿಲಕ್ ವರ್ಮಾ 2 ಎಸೆತಗಳಲ್ಲಿ 1 ಸಿಕ್ಸರ್ ಸಹೀತ ಅಜೇಯ 7 ರನ್ ಬಾರಿಸಿದರು. ಆಸ್ಟ್ರೇಲಿಯಾ ಪರ ನಾಥನ್ ಎಲ್ಲೀಸ್ 3 ವಿಕೆಟ್ ಪಡೆದರು.







