ನವದೆಹಲಿ: ಬಾಂಗ್ಲಾದೇಶ ವಿರುದ್ಧದ ಎರಡನೇ ಟಿ20 ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶದ ವಿರುದ್ಧ 86 ರನ್ಗಳ ಅಂತರದಿಂದ ಗೆಲುವು ಸಾಧಿಸಿದೆ. ಇದರೊಂದಿಗೆ 3 ಪಂದ್ಯಗಳ ಟಿ20 ಸರಣಿಯನ್ನು ಭಾರತ 2–0ರಿಂದ ಕೈವಶ ಮಾಡಿಕೊಂಡಿತು.ದೆಹಲಿಯ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ
ಭಾರತ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿತ್ತು.
ಟೀಮ್ ಇಂಡಿಯಾ ಪರ ನಿತೀಶ್ ರೆಡ್ಡಿ (74; 34ಎಸೆತ) ಅತ್ಯಂತ ಆಕರ್ಷಕ ಬ್ಯಾಟಿಂಗ್ ಮಾಡಿದರು. 7 ಸಿಕ್ಸರ್ ಮತ್ತು 4 ಬೌಂಡರಿಗಳನ್ನು ಸಿಡಿಸಿದ ಅವರು ಪ್ರೇಕ್ಷಕರಿಗೆ ರಸದೌತಣ ನೀಡಿದರು. ಇನ್ನೊಂದೆಡೆ ರಿಂಕು (53; 29ಎಸೆತ 5 ಬೌಂಡರಿ, 3 ಸಿಕ್ಸರ್) ಅವರೂ ತಮ್ಮ ಎಂದಿನ ಬೀಸಾಟದಿಂದ ಗಮನ ಸೆಳೆದರು. ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ ಇವರಿಬ್ಬರೂ ಸೇರಿಸಿದ 108 ರನ್ ಗಳಿಸಿದ್ದರು.ಬಳಿಕ ಕ್ರೀಸ್ಗೆ ಬಂದ ಹಾರ್ದಿಕ್ ಪಾಂಡ್ಯ 19 ಎಸೆತಗಳಲ್ಲಿ ತಲಾ 2 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 32 ರನ್ ಗಳಿಸಿ ತಂಡಕ್ಕೆ ಆಸರೆಯಾದರು.
222 ರನ್ಗಳ ಬೃಹತ್ ಮೊತ್ತ ಬೆನ್ನತ್ತಿದ ಬಾಂಗ್ಲಾ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 135 ರನ್ ಗಳಿಸಲಷ್ಟೇ ಶಕ್ತವಾಯಿತು.
ಬೌಲಿಂಗ್ನಲ್ಲಿಯೂ ಮಿಂಚಿದ ನಿತೀಶ್ ರೆಡ್ಡಿ 2 ವಿಕೆಟ್ ಉರುಳಿಸಿದರು.