ಗ್ವಾಲಿಯರ್: ಬಾಂಗ್ಲಾದೇಶ ವಿರುದ್ಧದ ಟಿ20 ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಅಂತರದಿಂದ ಗೆಲುವು ಸಾಧಿಸಿದೆ.ಗ್ವಾಲಿಯರ್ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 19.5 ಓವರ್ಗಳಲ್ಲಿ 127 ರನ್ ಗಳಿಸಿ ಆಲೌಟ್ ಆಗಿತ್ತು. ನಾಯಕ ನಜ್ಮುಲ್ ಹೊಸೈನ್ ಶಾಂಟೊ 27 ಹಾಗೂ
ಮೆಹದಿ ಹಸನ್ ಮಿರಾಜ್ 35 ರನ್ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು. ಭಾರತದ ಪರ ಅರ್ಷದೀಪ್ ಸಿಂಗ್ 3 ವಿಕೆಟ್ ಉರುಳಿಸಿದರು.
ಸಾಧಾರಣ ಮೊತ್ತ ಬೆನ್ನತ್ತಿದ ಭಾರತ 11.5 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 132 ರನ್ ಬಾರಿಸಿ ಗೆಲುವಿನ ನಗೆ ಬೀರಿತು. ಹಾರ್ದಿಕ್ ಪಾಂಡ್ಯ 16 ಎಸೆತಗಳಲ್ಲಿ 2 ಸಿಕ್ಸರ್, 5 ಬೌಂಡರಿ ಸಹಿತ 39 ರನ್ ಗಳಿಸಿದರೆ, ಸಂಜು ಸ್ಯಾಮ್ಸನ್ 29, ನಾಯಕ ಸೂರ್ಯಕುಮಾರ್ ಯಾದವ್ 29 ರನ್ ಗಳಿಸಿ ಮಿಂಚಿದರು.
ವೇಗದ ಬೌಲರ್ ಮಯಂಕ್ ಯಾದವ್ ಅವರು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ಗೆ ಪದಾರ್ಪಣೆ ಮಾಡಿದರು. ಇವರು ಪ್ರತಿ ಗಂಟೆಗೆ 150 ಕಿ.ಮೀ ವೇಗದಲ್ಲಿ ಬೌಲ್ ಮಾಡಲಿದ್ದಾರೆ. ಹಾಗೇ ಬ್ಯಾಟರ್ ನಿತೀಶ್ ಕುಮಾರ್ ರೆಡ್ಡಿ ಸಹ ಪದಾರ್ಪಣೆ ಮಾಡಿದರು.