ಹಾಂಗ್ಝೌ:ನೇಪಾಳ ತಂಡದ ವಿರುದ್ಧ 23 ರನ್ಗಳ ಜಯ ದಾಖಲಿಸಿರುವ ಭಾರತ ಏಷ್ಯನ್ ಗೇಮ್ಸ್ ಕ್ರಿಕೆಟ್ನಲ್ಲಿ ಸೆಮಿ ಫೈನಲ್ ಪ್ರವೇಶಿಸಿದೆ.ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ಗಳಲ್ಲಿ
4 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿತು. ನೇಪಾಳ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ179 ರನ್ ಗಳಿಸಿ ಸೋಲೋಪ್ಪಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಭಾರತ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಸಿಡಿಸಿದ ಸ್ಪೋಟಕ ಶತಕದ ನೆರವಿನಿಂದ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿತ್ತು. ಜೈಸ್ವಾಲ್ 49 ಎಸೆತಗಳಲ್ಲಿ 8 ಬೌಂಡರಿ ಹಾಗೂ 7 ಸಿಕ್ಸರ್ ನೆರವಿನಿಂದ 100 ರನ್ ಗಳಿಸಿದರು. ರಿತುರಾಜ್ ಗಾಯಕ್ವಾಡ್ 23, ಶಿವಂ ದುಬೆ 25 ರನ್ ಗಳಿಸಿದರು. ರಿಂಕು ಸಿಂಗ್ 15 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 2 ಬೌಂಡರಿ ನೆರವಿನಿಂದ ಅಜೇಯ 37 ರನ್ ಬಾರಿಸಿದರು.