ಬೆಂಗಳೂರು: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಅಂತಿಮ ಲೀಗ್ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡವನ್ನು 160 ರನ್ಗಳಿಂದ ಮಣಿಸಿದ ಭಾರತ ತಂಡ ಎಲ್ಲಾ 9 ಲೀಗ್ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ. ನ.15ರಂದು ಭಾರತ ಮೊದಲ ಸೆಮಿಫೈನಲ್ನಲ್ಲಿ ನ್ಯೂಝಿಲೆಂಡ್ ತಂಡವನ್ನು ಎಸುರಿಸಲಿದೆ.
ಭಾರತ ನೀಡಿದ್ದ 411 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ನೆದರ್ಲೆಂಡ್ಸ್ ತಂಡ 47.5 ಓವರ್ಗಳಲ್ಲಿ 250 ರನ್ಗಳಿಗೆ ಆಲೌಟ್ ಆಯಿತು. ನೆದರ್ಲೆಂಡ್ಸ್ ಪರ

ತೇಹಾ ನಿಡಮನೂರು(54) ಅರ್ಧಶತಕ ಸಿಡಿಸಿದರೆ, ಸಿಬ್ರಾಂಡ್ ಎಂಗೆಲ್ಬ್ರೆಕ್ಟ್ 45 ರನ್ ಸಿಡಿಸಿದರು.ಭಾರತದ ಪರ ಒಂಬತ್ತು ಮಂದಿ ಬೌಲಿಂಗ್ ಮಾಡಿದ್ದು ವಿಶೇಷವಾಗಿತ್ತು. ರೆಗ್ಯುಲರ್ ಬೌಲರ್ಗಳ ಜೊತೆ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶುಭಮನ್ ಗಿಲ್ ಸಹ ಬೌಲಿಂಗ್ ಮಾಡಿದರು. ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ರವೀಂದ್ರ ಜಡೇಜಾ, ಕಲದೀಪ್ ಯಾದವ್ ತಲಾ 2 ವಿಕೆಟ್ ಪಡೆದರು. ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 410 ರನ್ ಗಳಿಸಿತು.ಭಾರತದ ಪರ ಕೆ.ಎಲ್.ರಾಹುಲ್, ಶ್ರೇಯಸ್ ಅಯ್ಯರ್ ಸ್ಪೋಟಕ ಶತಕ ಸಿಡಿಸಿದರೆ ರೋಹಿತ್ ಶರ್ಮ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ ಆಕರ್ಷಕ ಅರ್ಧ ಶತಕ ಸಿಡಿಸಿದರು. ವಿಶ್ವಕಪ್ನಲ್ಲಿ ಚೊಚ್ಚಲ ಶತಕ ದಾಖಲಿಸಿದ

ಶ್ರೇಯಸ್ ಐಯ್ಯರ್ 94 ಎಸೆತಗಳಲ್ಲಿ 10 ಬೌಂಡರಿ 5 ಸಿಕ್ಸರ್ ಸಹಿತ ಅಜೇಯ 128 ರನ್ ಬಾರಿಸಿದರು. ಕೆ ಎಲ್ ರಾಹುಲ್ ಕೇವಲ 64 ಎಸೆತಗಳಲ್ಲಿ 11 ಬೌಂಡರಿ 4 ಸಿಕ್ಸರ್ ಸಹಿತ 102 ರನ್ ಗಳಿಸಿದರು. ರೋಹಿತ್ ಶರ್ಮ 54 ಎಸೆತಗಳಲ್ಲಿ 8 ಬೌಂಡರಿ 2 ಸಿಕ್ಸರ್ ಸಹಿತ 61 ರನ್ ಪೇರಿಸಿದರೆ, ಶುಭ್ಮನ್ ಗಿಲ್ 32 ಎಸೆತಗಳಲ್ಲಿ 3 ಬೌಂಡರಿ 4 ಭರ್ಜರಿ ಸಿಕ್ಸರ್ ನೆರವಿನಿಂದ 51 ರನ್ ಪೇರಿಸಿದರು. ವಿರಾಟ್ ಕೊಹ್ಲಿ 56 ಎಸೆತಗಳಲ್ಲಿ 5 ಬೌಂಡರಿ 1 ಸಿಕ್ಸರ್ ಸಹಿತ 51 ರನ್ ಗಳಿಸಿದರು. ಶ್ರೇಯಸ್ ಅಯ್ಯರ್ ಹಾಗೂ ಕೆ.ಎಲ್.ರಾಹುಲ್ 4ನೇ ವಿಕೆಟ್ಗೆ 127 ಎಸೆತಗಳಲ್ಲಿ 208 ರನ್ ಬಾರಿಸಿ ಭದ್ರ ಅಡಿಪಾಯ ಹಾಕಿದರು. ಶ್ರೇಯಸ್ ಅಯ್ಯರ್ ಪ್ಲೇಯರ್ ಆಫ್ ದಿ ಮ್ಯಾಚ್ ಆದರು











