ಪಲ್ಲೆಕೆಲೆ: ಶ್ರೀಲಂಕಾ ವಿರುದ್ಧ ನಡೆದ ಮಳೆ ಬಾಧಿತ ಎರಡನೇ ಟ್ವೆಂಟಿ-20 ಪಂದ್ಯದಲ್ಲಿ ಟೀಮ್ ಇಂಡಿಯಾ, ಡಕ್ವರ್ಥ್ ಲೂಯಿಸ್ ನಿಯಮದ ಅನ್ವಯ ಏಳು ವಿಕೆಟ್ ಅಂತರದ ಗೆಲುವು ದಾಖಲಿಸಿದೆ.ಆ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಉಳಿದಿರುವಂತೆಯೇ
2-0 ಅಂತರದಲ್ಲಿ ವಶಪಡಿಸಿಕೊಂಡಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ಒಂಬತ್ತು ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತ್ತು. ಬಳಿಕ ಮಳೆ ಸುರಿದಿದ್ದರಿಂದ ಭಾರತದ ಗೆಲುವಿಗೆ ಎಂಟು ಓವರ್ಗಳಲ್ಲಿ 78 ರನ್ಗಳ ಗುರಿ ನಿಗದಿಪಡಿಸಲಾಯಿತು. ಭಾರತ ತಂಡ 6.3 ಓವರ್ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.ಶನಿವಾರ ನಡೆದ ಮೊದಲ ಪಂದ್ಯದಲ್ಲಿ ಭಾರತ 46 ರನ್ ಅಂತರದ ಗೆಲುವು ದಾಖಲಿಸಿತ್ತು. ಭಾರತದ ಪರ ಯಶಸ್ವಿ ಜೈಸ್ವಾಲ್ 15 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 30 ರನ್ ಬಾರಿಸಿದರು. ನಾಯಕ ಸೂರ್ಯಕುಮಾರ್ ಯಾದವ್ 12 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 26 ರನ್ ಹಾರ್ದಿಕ್ ಪಾಂಡ್ಯ ಕೇವಲ 9 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಅಜೇಯ 22 ರನ್ ರನ್ ಬಾರಿಸಿ ಗೆಲುವಿನದಡ ಸೇರಿಸಿದರು.