ಚೆನ್ನೈ: ಟಿ20 ವಿಶ್ವಕಪ್ ಪಂದ್ಯಾವಳಿಯ ಸೂಪರ್ 8ರ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ 72 ರನ್ಗಳ ಅಂತರದಲ್ಲಿ ಜಿಂಬಾಬ್ವೆ ತಂಡವನ್ನು ಮಣಿಸಿತು. ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 256 ರನ್ ಪೇರಿಸಿತು. ಕಠಿಣ ಗುರಿ ಬೆನ್ನಟ್ಟಿದ ಜಿಂಬಾಬ್ವೆ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 184 ರನ್ ಗಳಿಸಿತು. ಜಿಂಬಾಬ್ವೆ ಪರ
ಬ್ರಯಾನ್ ಬೆನೆಟ್ ಅಜೇಯ 97 ರನ್ ಗಳಿಸಿದರು. ನಾಯಕ ಸಿಕಂದರ್ ರಾಸ 31ರನ್ ಬಾರಿಸಿದರು. ಉಳಿದ ಬ್ಯಾಟರ್ಗಳು ವೈಫಲ್ಯ ಅನುಭವಿಸಿದರು. ಭಾರತದ ಪರ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದರು.ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಮೊದಲು ಬ್ಯಾಟ್ ಮಾಡಿದ ಭಾರತದ ಪರ ಬ್ಯಾಟರ್ಗಳು ಉತ್ತಮ ಪ್ರದರ್ಶನ ನೀಡಿದರು.
ಹಾರ್ದಿಕ್ ಪಾಂಡ್ಯ ಹಾಗು ಅಭಿಷೇಕ್ ಶರ್ಮಾ ಆಕರ್ಷಕ ಅರ್ಧ ಶತಕ ಸಿಡಿಸಿದರು. ಅಭಿಷೇಕ್ ಶರ್ಮ 30 ಎಸೆತಗಳಲ್ಲಿ ತಲಾ 4 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 55 ರನ್ ಚಚ್ಚಿದರೆ, ಪಾಂಡ್ಯ 23 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ 50 ರನ್ ಬಾರಿಸಿದರು. ಸಂಜು ಸ್ಯಾಮ್ಸನ್ 15 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ಅಜೇಯ 24, ಇಶಾನ್ ಕಿಸನ್ 24 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 38, ಸೂರ್ಯಕುಮಾರ್ ಯಾದವ್ 13 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 33 ರನ್, ತಿಲಕ್ ವರ್ಮ 16 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ 44 ರನ್ ಬಾರಿಸಿದರು.










