ಆ್ಯಂಟಿಗಾ:ಟಿ20 ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶಕ್ಕೆ ಭಾರತ 197 ರನ್ಗಳ ಗೆಲುವಿನ ಗುರಿ ನೀಡಿದೆ.ಇಲ್ಲಿನ ರಿಚರ್ಡ್ಸನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಭಾರತ ಮೊದಲು ಬ್ಯಾಟ್ ಮಾಡಿ
20 ಓವರ್ಗಳಲ್ಲಿ
5 ವಿಕೆಟ್ ಕಳೆದುಕೊಂಡು ಭಾರತ 196 ರನ್ ಪೇರಿಸಿತು. ಹಾರ್ದಿಕ್ ಪಾಂಡ್ಯ ಬಿರುಸಿನ ಅರ್ಧ ಶತಕ ಸಿಡಿಸಿದರು. 27 ಎಸೆತಗಳಲ್ಲಿ 4 ಬೌಂಡರಿ 3 ಸಿಕ್ಸರ್ ನೆರವಿನಿಂದ ಪಾಂಡ್ಯ ಅಜೇಯ 50 ರನ್ ಬಾರಿಸಿದರು. ವಿರಾಟ್ ಕೊಹ್ಲಿ 28 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ
37 ರನ್ ಬಾರಿಸಿದರು, ರಿಷಭ್ ಪಂತ್ 24 ಎಸೆತಗಳಲ್ಲಿ 4 ಬೌಂಡರಿ ಎರಡು ಸಿಕ್ಸರ್ ನೆರವಿನಿಂದ 36 ರನ್ ಬಾರಿಸಿದರೆ, ಶಿವಂ ದುಬೆ 24 ಎಸೆತಗಳಲ್ಲಿ 3 ಸಿಕ್ಸರ್ ನೆರವಿನಿಂದ 34 ರನ್ ಬಾರಿಸಿದರೆ, ನಾಯಕ ರೋಹಿತ್ ಶರ್ಮ 11 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 23 ರನ್ ಗಳಿಸಿ ಉತ್ತಮ ಕೊಡುಗೆ ನೀಡಿದರು. ಎಲ್ಲಾ ಬ್ಯಾಟರ್ಗಳು ಉತ್ತಮ ಕೊಡುಗೆ ನೀಡುವ ಮೂಲಕ ಉತ್ತಮ ಮೊತ್ತ ಪೇರಿಸಲು ನೆರವಾದರು. ಬಾಂಗ್ಲಾ ಪರ ತಂಜೀಮ್, ರಶೀದ್ ತಲಾ 2 ವಿಕೆಟ್ ಪಡೆದರು.