ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಮುಖಾಮುಖಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತದ ಪರ ನಾಯಕ ರೋಹಿತ್ ಶರ್ಮ ಹಾಗೂ ಶುಭ್ಮನ್ ಗಿಲ್ ಇನ್ನೀಂಗ್ಸ್ ಆರಂಭಿಸಿದ್ದಾರೆ. ಸೆಮಿಫೈನಲ್ ಪಂದ್ಯಕ್ಕೆ ಭಾರತ ಯಾವುದೇ ಬದಲಾವಣೆ ಮಾಡಿಲ್ಲ.
ರೋಹಿತ್ ಶರ್ಮ ಹಾಗೂ ಶುಭ್ಮನ್ ಗಿಲ್ ಭಾರತಕ್ಕೆ ಉತ್ತಮ ಅರಂಭ ಒದಗಿಸಿದ್ದಾರೆ. ಭಾರತ 6 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 58 ರನ್ ಗಳಿಸಿದೆ.









