ಕೊಲಂಬೊ: ಏಷ್ಯಾ ಕಪ್ 2023 ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಮತ್ತು ಶ್ರೀಲಂಕಾ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಶ್ರೀಲಂಕಾ 5 ಓವರ್ನಲ್ಲಿ 5 ವಿಕೆಟ್ ಕಳೆದುಕೊಂಡು 12 ರನ್ ಗಳಿಸಿದೆ. ಮಾರಕ ಬೌಲಿಂಗ್ ನಡೆಸಿದ ಮಹಮ್ಮದ್ ಸಿರಾಜ್ ಒಂದೇ ಓವರ್ನಲ್ಲಿ 4 ವಿಕೆಟ್ ಉರುಳಿಸಿದರು ಮಳೆಯಿಂದ ಪಂದ್ಯ ಸ್ವಲ್ಪ ವಿಳಂಬವಾಗಿ ಆರಂಭಗೊಂಡಿದೆ. ಭಾರತ ತಂಡದಲ್ಲಿ ಗಾಯಾಳು
ಅಕ್ಷರ್ ಪಟೇಲ್ ಸ್ಥಾನಕ್ಕೆ ವಾಷಿಂಗ್ಟನ್ ಸುಂದರ್ ಆಯ್ಕೆಯಾಗಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬೂಮ್ರಾ, ಕುಲದೀಪ್ ಯಾದವ್, ಹಾರ್ದಿಕ್ ಪಾಂಡ್ಯ ಹಾಗೂ ಮೊಹಮ್ಮದ್ ಸಿರಾಜ್ ತಂಡವನ್ನು ಸೇರಿದ್ದಾರೆ.
ಭಾರತ ಪ್ಲೇಯಿಂಗ್ ಇಲೆವೆನ್ ಇಂತಿದೆ:
ರೋಹಿತ್ ಶರ್ಮಾ, (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬೂಮ್ರಾ, ಕುಲದೀಪ್ ಯಾದವ್ ಮತ್ತು ಮೊಹಮ್ಮದ್ ಸಿರಾಜ್.
ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್:
ದಸುನ್ ಶನಕಾ (ನಾಯಕ), ಪಥುಮ್ ನಿಸಾಂಕ, ಕುಶಾಲ ಪೆರೆರಾ, ಕುಶಾಲ ಮೆಂಡಿಸ್ (ಉಪನಾಯಕ), ಸದೀರ ಸಮರವಿಕ್ರಮ, ಚರಿತ ಅಸಲಂಕಾ, ಧನಂಜಯ್ ಡಿಸಿಲ್ವಾ, ದುನಿತ್ ವೆಲ್ಲಾಳಗೆ, ದುಶಾನ್ ಹೇಮಂತ, ಪ್ರಮೋದ ಮಧುಶಾನ್ ಮತ್ತು ಮತೀಷ ಪಥಿರಾಣ