ಹಾಂಗ್ಝೌ: ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನ ಭಾರತ ಪದಕಗಳ ಭರ್ಜರಿ ಬೇಟೆಯನ್ನು ಮುಂದುವರಿಸಿದೆ. 50 ಮೀಟರ್ ಟ್ರ್ಯಾಪ್ ಶೂಟಿಂಗ್ ಪುರುಷರ ವಿಭಾಗದಲ್ಲಿ ಭಾರತದ ತತ್ವ ಪೃಥ್ವಿರಾಜ್ ತೊಂಡೈಮಾನ್, ಕಿನಾನ್ ಚೆನೈ ಮತ್ತು ಜೋರವರ್ ಸಿಂಗ್ ಸಂಧು ಅವರ
ತಂಡ ಭಾರತಕ್ಕೆ ಚಿನ್ನದ ಪದಕವನ್ನು ಗೆದ್ದುಕೊಟ್ಟಿದೆ.ಏಷ್ಯನ್ ಗೇಮ್ಸ್ ಗಾಲ್ಫ್ ಪಂದ್ಯದಲ್ಲಿ ಕರ್ನಾಟಕದ ಅದಿತಿ ಅಶೋಕ್ ಬೆಳ್ಳಿ ಪದಕ ಪಡೆದಿದ್ದಾರೆ.ಏಷ್ಯನ್ ಗೇಮ್ಸ್ ಮಹಿಳೆಯರ ಗಾಲ್ಫ್ ಸ್ಪರ್ಧೆಯಲ್ಲಿ ಭಾರತಕ್ಕೆ ಪದಕ ಪಡೆದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಭಾರತದ ರಾಜೇಶ್ವರಿ ಕುಮಾರಿ , ಮನೀಶಾ ಕೀರ್, ಪ್ರೀತಿ ರಾಜಕ್ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಪುರುಷರ 10,000 ಮೀ ಓಟದಲ್ಲಿ ಭಾರತದ ಲಾಂಗ್ ಡಿಸ್ಟೆನ್ಸ್ ಓಟಗಾರರಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದಿದ್ದಾರೆ,