ಹ್ಯಾಮಿಲ್ಟನ್: ಹ್ಯಾಮಿಲ್ಟನ್ನ ಸೆಡನ್ ಪಾರ್ಕ್ನಲ್ಲಿ ಮಂಗಳವಾರ ನಡೆಯಬೇಕಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯವು ಮಳೆಯಿಂದಾಗಿ ರದ್ದುಗೊಂಡಿದೆ.ಐದು ಪಂದ್ಯಗಳ ಈ ಸರಣಿಯಲ್ಲಿ ಭಾರತ ತಂಡವು
ಈಗಾಗಲೇ 2-0 ಅಂತರದ ಮುನ್ನಡೆ ಸಾಧಿಸಿದ್ದು, ಸರಣಿ ಗೆಲ್ಲಲು ಇನ್ನೊಂದು ಪಂದ್ಯ ಗೆಲ್ಲಬೇಕಿದೆ. ಮತ್ತೊಂದೆಡೆ ಕಿವೀಸ್ ಪಡೆ ಅಂತಿಮ ಎರಡೂ ಪಂದ್ಯಗಳಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಸತತ ಮೂರನೇ ಬಾರಿಗೆ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭಮನ್ ಗಿಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಅಲ್ಲದೆ, ಹಿಂದಿನ ಎರಡು ಪಂದ್ಯಗಳಲ್ಲಿ ಆಡಿದ್ದ ಅದೇ ತಂಡವನ್ನೇ ಕಣಕ್ಕಿಳಿಸಲಾಯಿತು. ಆದರೆ, ಪಂದ್ಯವನ್ನು 40 ಓವರ್ಗಳಿಗೆ ಸೀಮಿತಗೊಳಿಸಿ ಪಂದ್ಯ ಆಯೋಜಿಸುವ ಆಯೋಜಕರ ಸಿದ್ಧತೆಗೆ ವರುಣನ ಕೃಪೆ ಇರಲಿಲ್ಲ. ಅಂತಿಮವಾಗಿ ಅಂಪೈರ್ಗಳು ಪಂದ್ಯವನ್ನು ರದ್ದುಗೊಳಿಸುವುದಾಗಿ ಘೋಷಿಸಿದರು.































