ನವದೆಹಲಿ: ಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದಲ್ಲಿ ಈಕ್ವೇಸ್ಟ್ರಿಯನ್ ಅಥವಾ ಕುದುರೆ ಸವಾರಿಯಲ್ಲಿ ಭಾರತ ತಂಡಕ್ಕೆ ಚಿನ್ನದ ಪದಕ ಲಭಿಸಿದೆ.
ಟೀಮ್ ಡ್ರೆಸ್ಸೇಜ್ ಈವೆಂಟ್ನಲ್ಲಿ ಭಾರತ ತಂಡವು ಒಟ್ಟು 209.205 ಅಂಕ ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಚೀನಾ 204.882 ರೊಂದಿಗೆ ಬೆಳ್ಳಿಯೊಂದಿಗೆ ಮತ್ತು ಹಾಂಗ್ ಕಾಂಗ್ ಚೀನಾ 204.852 ರೊಂದಿಗೆ
3ನೇ ಸ್ಥಾನದಲ್ಲಿ ಕಂಚಿನ ಪದಕ ಪಡೆದುಕೊಂಡಿದೆ. ಡ್ರೆಸ್ಸೇಜ್ ಟೀಮ್ ಈವೆಂಟ್ನಲ್ಲಿ ತಂಡದ ಒಟ್ಟಾರೆ ಸ್ಕೋರ್ಗೆ ಅಗ್ರ 3 ತಂಡಗಳ ಸ್ಕೋರ್ ಅನ್ನು ಮಾತ್ರ ಪರಿಗಣಿಸಲಾಗುತ್ತದೆ.
ಬರೊಬ್ಬರಿ 41 ವರ್ಷಗಳ ಬಳಿಕ ಭಾರತ ಕುದುರೆ ಸವಾರಿ ತಂಡ ಚಿನ್ನದ ಪದಕಕ್ಕೆ ಮುತ್ತಿಟ್ಟಿದೆ. ಈ ಕ್ರೀಡೆಯಲ್ಲಿ 1982 ರ ಬಳಿಕ ಭಾರತಕ್ಕೆ ಸಿಕ್ಕ ಮೊದಲ ಚಿನ್ನದ ಪದಕ ಇದಾಗಿದೆ.
ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಸೇಲಿಂಗ್ನಲ್ಲಿ ಭಾರತದ ನೇಹಾ ಠಾಕೂರ್ ಬೆಳ್ಳಿ ಪದಕ ಜಯಿಸಿದ್ದಾರೆ. ಮಹಿಳೆಯರ ಡಿಂಘಿ ಐಎಲ್ಸಿಎ–4 ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ.ಒಟ್ಟು 32 ಅಂಕಗಳೊಂದಿಗೆ ಸ್ಪರ್ಧೆ ಮುಗಿಸಿದರು. ಅವರ ನೆಟ್ ಸ್ಕೋರ್ 27 ಆಗಿದ್ದರಿಂದ ಬೆಳ್ಳಿಗೆ ತೃಪ್ತಿ ಪಡಬೇಕಾಯಿತು. 16 ನೆಟ್ ಸ್ಕೋರ್ ಇದ್ದ ಥಾಯ್ಲೆಂಡ್ನ ನೊಪಾಸ್ಸೋರ್ನ್ ಖುನ್ಬೂಂಜಾನ್ ಚಿನ್ನ ಗೆದ್ದರು.