ಹೈದರಾಬಾದ್: ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ದಾಖಲೆಯ ಮೊತ್ತ ಪೇರಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 297 ರನ್ ಬಾರಿಸಿದೆ. ಸಂಜು ಸ್ಯಾಮ್ಸನ್ ಸ್ಪೋಟಕ ಶತಕ ಹಾಗೂ ನಾಯಕ ಸೂರ್ಯಕುಮಾರ್ ಯಾದವ್ ಅವರ ಬಿರುಸಿನ ಅರ್ಧ ಶತಕ, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್ ಅವರ ಸ್ಪೋಟಕ ಇನ್ನೀಂಗ್ಸ್ ನೆರವಿನಿಂದ
ಭಾರತ ಟಿ20ಯ ತನ್ನ ಅತೀ ಹೆಚ್ಚು ರನ್ಗಳ ದಾಖಲೆಯ ಮೊತ್ತ ದಾಖಲಿಸಿದೆ. ಆರಂಭಿಕನಾಗಿ ಕಣಕ್ಕೆ ಇಳಿದ ಸಂಜು ಸ್ಯಾಮ್ಸನ್ ಕೇವಲ 47 ಎಸೆತಗಳಲ್ಲಿ 11 ಬೌಂಡರಿ ಹಾಗೂ 8 ಸಿಕ್ಸರ್ ನೆರವಿನಿಂದ 111 ರನ್ ಬಾರಿಸಿದರು.ಸೂರ್ಯಕುಮಾರ್ ಯಾದವ್ 35 ಎಸೆತಗಳಲ್ಲಿ 8 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 75 ರನ್ ಚಚ್ಚಿದರು. ಹಾರ್ದಿಕ್ ಪಾಂಡ್ಯ 18 ಎಸೆತಗಳಲ್ಲಿ ತಲಾ 4 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 47 ರನ್,ರಿಯಾನ್ ಪರಾಗ್ 13 ಎಸೆತಗಳಲ್ಲಿ 1 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 34 ರನ್ ಗಳಿಸಿ ರನ್ ವೇಗ ಹೆಚ್ಚಿಸಿದರು. ಬೌಂಡರಿ, ಸಿಕ್ಸರ್ ಸುರಿಮಳೆ ಸುರಿಸಿ ಎರಡನೇ ವಿಕೆಟ್ಗೆ ಸ್ಯಾಮ್ಸನ್ ಹಾಗೂ ಸೂರ್ಯಕುಮಾರ್ 11.3 ಓವರ್ಗಳಲ್ಲಿ 173 ರನ್ ಬಾರಿಸಿದರು.
ಕೊನೆಯಲ್ಲಿ ಪಾಂಡ್ಯ ಹಾಗೂ ಪರಾಗ್ ಸ್ಪೋಟಕ ಬ್ಯಾಟಿಂಗ್ ನಡೆಸಿದರು.ಮೊದಲೆರಡು ಪಂದ್ಯಗಳಲ್ಲಿ ಜಯ ಗಳಿಸಿರುವ ಸೂರ್ಯಕುಮಾರ್ ಯಾದವ್ ಬಳಗವು ಮೂರು ಪಂದ್ಯಗಳ ಟಿ20 ಸರಣಿಯನ್ನು ಈಗಾಗಲೇ 2-0ರ ಅಂತರದಲ್ಲಿ ವಶಪಡಿಸಿಕೊಂಡಿದೆ. ಯುವ ಆಟಗಾರರನ್ನು ಒಳಗೊಂಡ ಭಾರತ ತಂಡವೀಗ ಅಂತಿಮ ಪಂದ್ಯವನ್ನೂ ಗೆದ್ದು ಸರಣಿ ಕ್ಲೀನ್ಸ್ವೀಪ್ ಮಾಡುವ ಇರಾದೆಯಲ್ಲಿದೆ.
ಗ್ವಾಲಿಯರ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ ಏಳು ವಿಕೆಟ್ ಮತ್ತು ದೆಹಲಿಯಲ್ಲಿ ನಡೆದ ಎರಡನೇ ಪಂದ್ಯದಲ್ಲಿ 86 ರನ್ ಅಂತರದ ಜಯ ದಾಖಲಿಸಿತ್ತು.
ಟಿ20 ಸರಣಿಗೂ ಮುನ್ನ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲೂ ಭಾರತ 2-0ರ ಅಂತರದ ಕ್ಲೀನ್ಸ್ವೀಪ್ ಸಾಧನೆಗೈದಿತ್ತು.