ನವದೆಹಲಿ:23ನೇ ಭಾರತ–ರಷ್ಯಾ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮಾತುಕತೆ ನಡೆಸಿದರು.ಭಾರತ ಮತ್ತು ರಷ್ಯಾ ನಡುವಿನ ಆರ್ಥಿಕ ಮತ್ತು ವ್ಯಾಪಾರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ದೃಢ ಸಂಕಲ್ಪ ಮಾಡಿದ ಉಭಯ ನಾಯಕರು, ಈ ಉದ್ದೇಶ ಸಾಧನೆಗಾಗಿ
5 ವರ್ಷಗಳ ಯೋಜನೆ ಅನುಷ್ಠಾನಕ್ಕೂ ಸಮ್ಮತಿಸಿದರು.ಎರಡೂ ದೇಶಗಳ ನಡುವೆ ವ್ಯಾಪಾರ ಮತ್ತು ಹೂಡಿಕೆ ಹೆಚ್ಚಿಸುವುದು, ತೈಲ ಸಂಸ್ಕರಣೆ, ಪೆಟ್ರೊಕೆಮಿಕಲ್ ತಂತ್ರಜ್ಞಾನ ಗಳು ಹಾಗೂ ಇದಕ್ಕೆ ಸಂಬಂಧಿಸಿದ ಕ್ಷೇತ್ರಗಳಲ್ಲಿ, ಎಲ್ಎನ್ಜಿ ಮತ್ತು ಪಿಎನ್ಜಿ ಮೂಲಸೌಕರ್ಯ ಹೆಚ್ಚಿಸುವುದು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿಸುವ ಬಗ್ಗೆಯೂ ಅವರು ಸಹಮತ ವ್ಯಕ್ತಪಡಿಸಿದ್ದಾರೆ.
ಭದ್ರತೆ, ಆರ್ಥಿಕತೆ, ವ್ಯಾಪಾರ ಮತ್ತು ಸಂಸ್ಕೃತಿ ಕ್ಷೇತ್ರದಲ್ಲಿ ಸಹಕಾರ ಹೆಚ್ಚಿಸುವುದಕ್ಕೆ ಹಾಗೂ ಹೂಡಿಕೆಗೆ ಉತ್ತೇಜನ ನೀಡಲು ರಷ್ಯಾ ಮತ್ತು ಭಾರತ ನಿರ್ಧರಿಸಿವೆ.ಭಾರತಕ್ಕೆ ತಡೆರಹಿತ ಇಂಧನ ಪೂರೈಕೆಯಾಗುವುದನ್ನು ಖಾತ್ರಿಪಡಿಸಲಾಗವುದು’ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಹೇಳಿದ್ದಾರೆ.












