ಸೂಪರ್ಸ್ಪೋರ್ಟ್ ಪಾರ್ಕ್: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಸೆಂಚುರಿಯನ್ನ ಸೂಪರ್ಸ್ಪೋರ್ಟ್ ಪಾರ್ಕ್ನಲ್ಲಿ ಮಧ್ಯಾಹ್ನ 1.30ರಿಂದ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಿದರೆ, ತೆಂಬಾ ಬವುಮಾ ಆಫ್ರಿಕಾ ನಾಯಕನಾಗಿದ್ದಾರೆ. ಟಿ20 ಸರಣಿಯನ್ನು
ಸಮಬಲ ಮಾಡಿಕೊಂಡಿದ್ದ ಟೀಮ್ ಇಂಡಿಯಾ, ಬಳಿಕ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿತು. ಇದೀಗ ಉಭಯ ತಂಡಗಳು ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ.ಭಾರತ vs ದಕ್ಷಿಣ ಆಫ್ರಿಕಾ ಪ್ರಥಮ ಟೆಸ್ಟ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ ಹಾಟ್ಸ್ಟಾರ್ ಪಂದ್ಯಗಳನ್ನು ಆನ್ಲೈನ್ನಲ್ಲಿ ಲೈವ್ ಸ್ಟ್ರೀಮ್ ಮಾಡುತ್ತದೆ.
ತಂಡಗಳು:
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪ ನಾಯಕ), ಪ್ರಸಿದ್ಧ್ ಕೃಷ್ಣ, ಕೆಎಸ್ ಭರತ್ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್.
ದ. ಆಫ್ರಿಕಾ ಟೆಸ್ಟ್ ತಂಡ: ತೆಂಬಾ ಬವುಮಾ (ನಾಯಕ), ಡೇವಿಡ್ ಬೆಡಿಂಗ್ಹ್ಯಾಮ್, ಆಂಡ್ರೆ ಬರ್ಗರ್, ಜೆರಾಲ್ಡ್ ಕೋಟ್ಜಿ, ಟೋನಿ ಡಿ ಜೊರ್ಜಿ, ಡೀನ್ ಎಲ್ಗರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಕೀಗನ್ ಪೀಟರ್ಸನ್, ಕಗಿಸೊ ರಬಾಡ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರೆನ್.










