ನವದೆಹಲಿ: ಜುಲೈ ತಿಂಗಳಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ 15 ಸದಸ್ಯರನ್ನೊಳಗೊಂಡ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದಾರೆ.ವಿರಾಟ್ ಕೊಹ್ಲಿ ಅವರು ಗಾಯದ ಕಾರಣದಿಂದಾಗಿ ಅವರು ಇತ್ತೀಚೆಗೆ ಮುಕ್ತಾಯಗೊಂಡ ಅಫ್ಗಾನಿಸ್ತಾನ ವಿರುದ್ಧದ 3 ಪಂದ್ಯಗಳ
ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಶುಭಮನ್ ಗಿಲ್ ನಾಯಕತ್ವದ 15 ಸದಸ್ಯರ ಭಾರತ ತಂಡದಲ್ಲಿ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರನ್ನು ಕೈಬಿಟ್ಟು ವಿರಾಟ್ ಕೊಹ್ಲಿ ಅವರಿಗೆ ಮಣೆ ಹಾಕಲಾಗಿದೆ. ಉಳಿದಂತೆ ಅಫ್ಗಾನಿಸ್ತಾನ ಸರಣಿಗೆ ಆಯ್ಕೆ ಮಾಡಲಾದ ತಂಡವನ್ನು ಉಳಿಸಿಕೊಂಡಿದೆ.
ಅಫ್ಗಾನಿಸ್ತಾನ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದರು. ವಿಶ್ರಾಂತಿ ಪಡೆದಿದ್ದ ಅನುಭವಿ ವೇಗಿ ಜಸ್ಪ್ರೀಪ್ ಬೂಮ್ರಾ ಅವರು ತಂಡಕ್ಕೆ ಮರಳಿದ್ದಾರೆ. ಅನುಭವಿ ಆಲ್ರೌಂಡರ್ ಅಕ್ಷರ್ ಪಟೇಲ್ ಕೂಡ ಸ್ಪಿನ್ನರ್ ಹರ್ಷ್ ದುಬೆ ಬದಲಿಗೆ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಜುಲೈ 14 ರಂದು ಎಡ್ಜ್ಬಾಸ್ಟನ್, ಜುಲೈ 16ರಂದು ಸೋಫಿಯಾ ಗಾರ್ಡನ್ಸ್ ಮತ್ತು ಜುಲೈ 19ರಂದು ಲಾರ್ಡ್ಸ್ನಲ್ಲಿ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ.
ಭಾರತ ತಂಡ:
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲದೀಪ ಯಾದವ್, ಜಸ್ಪ್ರೀಪ್ ಬೂಮ್ರಾ, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ ಗುರ್ನೂರ್ ಬ್ರಾರ್, ಅರ್ಷದೀಪ ಸಿಂಗ್







