ಕೊಲಂಬೋ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡಲಿರುವ 15 ಸದಸ್ಯರುಗಳನ್ನು ಒಳಗೊಂಡ ಭಾರತ ಕ್ತಿಕೆಟ್ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ.ನಾಯಕ ರೋಹಿತ್ ಶರ್ಮಾ ಹಾಗೂ ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಜಂಟಿ ಸುದ್ದಿಗೋಷ್ಠಿ ನಡೆಸಿ ವಿಶ್ವಕಪ್ ನಲ್ಲಿ ಭಾಗವಹಿಸುವ ಭಾರತದ ಕ್ರಿಕೆಟ್ ತಂಡವನ್ನು ಪ್ರಕಟಿಸಿದ್ದಾರೆ. ಭಾರತದ ಆತಿಥ್ಯದಲ್ಲಿ ಈ ವರ್ಷದ ಅಕ್ಟೋಬರ್ –ನವೆಂಬರ್ನಲ್ಲಿ ನಡೆಯಲಿರುವ
ಏಕದಿನ ವಿಶ್ವಕಪ್ಗೆ ಏಳು ಬ್ಯಾಟರ್ಗಳು, ನಾಲ್ವರು ಬೌಲರ್ಗಳು ಮತ್ತು ನಾಲ್ವರು ಆಲ್ ರೌಂಡರ್ಗಳನ್ನು ಆಯ್ಕೆ ಮಾಡಿದೆ. ಕೆ.ಎಲ್. ರಾಹುಲ್ ಮತ್ತು ಇಶಾನ್ ಕಿಶನ್ ಇಬ್ಬರೂ ಏಕದಿನ ವಿಶ್ವಕಪ್ ಗಾಗಿ ಭಾರತದ 15 ಮಂದಿಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಈಗ ನಡೆಯುತ್ತಿರುವ ಏಶ್ಯಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ಲ ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ ಹಾಗೂ ವೇಗದ ಬೌಲರ್ ಪ್ರಸಿದ್ದ ಕೃಷ್ಣ ಅವರನ್ನು ವಿಶ್ವಕಪ್ ತಂಡದಿಂದ ಕೈಬಿಡಲಾಗಿದೆ.
ಭಾರತದ ವಿಶ್ವಕಪ್ ತಂಡ
ರೋಹಿತ್ ಶರ್ಮಾ(ನಾಯಕ) , ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮುಹಮ್ಮದ್ ಶಮಿ, ಮುಹಮ್ಮದ್ ಸಿರಾಜ್ ಹಾಗೂ ಕುಲದೀಪ್ ಯಾದವ್,
ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5ರಂದು ಅಹಮದಾಬಾದ್ನಲ್ಲಿ ಆರಂಭವಾಗಲಿದ್ದು ಉದ್ಘಾಟನಾ ಪಂದ್ಯದಲ್ಲಿ 2019ರ ವಿಶ್ವಕಪ್ ಫೈನಲಿಸ್ಟ್ ಗಳಾಗಿದ್ದ ಇಂಗ್ಲೆಂಡ್ ಹಾಗೂ ನ್ಯೂಝಿಲ್ಯಾಂಡ್ ಸೆಣಸಾಡಲಿವೆ. ಅಕ್ಟೋಬರ್ 8 ರಂದು ಚೆನ್ನೈ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತನ್ನ ಅಭಿಯಾನವನ್ನು ಆರಂಭಿಸುತ್ತದೆ.ನವೆಂಬರ್ 19ರಂದು ಫೈನಲ್ ಪಂದ್ಯ ಕೂಡ ಅಹಮದಾಬಾದ್ ನಲ್ಲೇ ನಡೆಯಲಿದೆ.