ಮುಂಬೈ:ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ 16 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಇಶಾನ್ ಕಿಶನ್ ಬದಲಿಗೆ ಧ್ರುವ್ ಜುರೆಲ್ ಅವರಿಗೆ ಭಾರತ ಕ್ರಿಕೆಟ್ ತಂಡದಲ್ಲಿ ಅವಕಾಶ ನೀಡಲಾಗಿದೆ. ಗಾಯಗೊಂಡಿರುವ ಮಹಮ್ಮದ್ ಶಮಿ ಹಾಗೂ
ಋತುರಾಜ್ ಗಾಯಕ್ವಾಡ್ ಅವರನ್ನು ತಂಡಕ್ಕೆ ಸೇರಿಸಿಲ್ಲ.
ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಸಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್.ರಾಹುಲ್, ಧ್ರುವ್ ಜುರೆಲ್,ಕೆ.ಎಸ್.ಭರತ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ) ಅವೇಶ್ ಖಾನ್.









