ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಬಿಸಿಸಿಐ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ವೇಗಿ ಜಸ್ಪ್ರೀತ್ ಬುಮ್ರಾ ತಂಡ ಉಪನಾಯಕರಾಗಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್ಗಳಲ್ಲಿ ಆಡುವ 11ರ ಬಳಗದಲ್ಲಿ ಅವಕಾಶ ಪಡೆಯಲು
ವಿಫಲವಾದ ಯುವ ವೇಗಿ ಯಶ್ ದಯಾಲ್ ಅವರನ್ನು ಕೈಬಿಡಲಾಗಿದೆ. ಇನ್ನು ನ್ಯೂಜಿಲೆಂಡ್ ಸರಣಿಗೆ ಮೂವರು ವೇಗದ ಬೌಲರ್ಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಆಕಾಶ್ ದೀಪ್ ಅವರನ್ನು ಆಯ್ಕೆ ಮಾಡಿರುವುದು ವಿಶೇಷ. ಆದರೆ ಅನುಭವಿ ಬೌಲರ್ ಮೊಹಮ್ಮದ್ ಶಮಿ ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದರಿಂದ ಅವರನ್ನು ಕೈಬಿಡಲಾಗಿದೆ.
ಅಕ್ಟೋಬರ್ 16 ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಮೊದಲ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಜಸ್ಪ್ರಿತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ಆಕಾಶ್ ದೀಪ್.