ನವದೆಹಲಿ: ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಾರ್ಡರ್ ಗಾವಸ್ಕರ್ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ ಆಡಲಿರುವ ಭಾರತ ತಂಡ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಗೆ ಭಾರತ ತಂಡ ಪ್ರಕಟಿಸಲಾಗಿದೆ.ರೋಹಿತ್ ಶರ್ಮಾ ನಾಯಕತ್ವದಲ್ಲಿ 18 ಆಟಗಾರರ ತಂಡವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಕರ್ನಾಟಕದ ಕೆ.ಎಲ್.ರಾಹುಲ್ ಮತ್ತು ಪ್ರಸಿದ್ಧಕೃಷ್ಣ ಅವರನ್ನೂ ಬಳಗದಲ್ಲಿ ಉಳಿಸಿಕೊಳ್ಳಲಾಗಿದೆ. ಕನ್ನಡಿಗ
ವೈಶಾಖ ವಿಜಯಕುಮಾರ್ ಅವರಿಗೆ ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಯಲ್ಲಿ ಆಡಲಿರುವ ಭಾರತ ತಂಡದಲ್ಲಿ ಸ್ಥಾನ ಲಭಿಸಿದೆ. ಸೂರ್ಯಕುಮಾರ್ ಯಾದವ್ ಈ ತಂಡಕ್ಕೆ ನಾಯಕರಾಗಿದ್ದಾರೆ.
ನ್ಯೂಜಿಲೆಂಡ್ ಎದುರಿನ ಎರಡನೇ ಟೆಸ್ಟ್ ಮೊದಲ ಇನಿಂಗ್ಸ್ನಲ್ಲಿ 7 ವಿಕೆಟ್ ಪಡೆದಿದ್ದ ವಾಷಿಂಗ್ಟನ್ ಸುಂದರ್ ಕೂಡ ಸ್ಥಾನ ಉಳಿಸಿಕೊಂಡಿದ್ದಾರೆ.
ಐಪಿಎಲ್ನಲ್ಲಿ ಮಿಂಚಿರುವ ಹರ್ಷಿತ್, ನಿತೀಶಕುಮಾರ್ ರೆಡ್ಡಿ ಅವರಿಗೆ ಟೆಸ್ಟ್ ತಂಡದಲ್ಲಿ ಆಡುವ ಅವಕಾಶ ನೀಡಲಾಗಿದೆ. ವೇಗಿ ಜಸ್ಪ್ರೀತ್ ಬೂಮ್ರಾ ಉಪನಾಯಕರಾಗಿದ್ದಾರೆ. ಆದರೆ ಗಾಯದ ಕಾರಣದಿಂದ ಕುಲದೀಪ್ ಯಾದವ್ ಅವರಿಗೆ ಸ್ಥಾನ ಸಿಕ್ಕಿಲ್ಲ. ವೇಗಿ ಮಯಂಕ್ ಯಾದವ್ ಮತ್ತು ಸ್ಪಿನ್ನರ್ ಅಕ್ಷರ್ ಪಟೇಲ್ ಅವರಿಗೂ ಸ್ಥಾನವಿಲ್ಲ.ಅಕ್ಷರ್ ಅವರಿಗೆ ಟಿ20 ತಂಡದಲ್ಲಿ ಅವಕಾಶ ನೀಡಲಾಗಿದೆ.
ಟೆಸ್ಟ್ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬೂಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ರಿಷಭ್ ಪಂತ್, ಧ್ರುವ ಜುರೇಲ್ (ಇಬ್ಬರೂ ವಿಕೆಟ್ಕೀಪರ್), ಸರ್ಫರಾಜ್ ಖಾನ್, ಆರ್. ಅಶ್ವಿನ್, ರವೀಂದ್ರ ಜಡೇಜ, ಮೊಹಮ್ಮದ್ ಸಿರಾಜ್, ಆಕಾಶದೀಪ್, ಪ್ರಸಿದ್ಧಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.
ದಕ್ಷಿಣ ಆಫ್ರಿಕಾ ಟಿ20 ಸರಣಿಗೆ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ವಿಜಯಕುಮಾರ್ ವೈಶಾಖ, ಆವೇಶ್ ಖಾನ್, ಯಶ್ ದಯಾಳ್.